ಕರ್ನಾಟಕದಿಂದ ಕೇರಳಕ್ಕೆ ಬಸ್ ಸೇವೆ ಪುನಾರಂಭ

ಮಂಗಳವಾರ, 13 ಜುಲೈ 2021 (12:30 IST)
ಬೆಂಗಳೂರು (ಜು.13): ಲಾಕ್ಡೌನ್ ಸಡಿಲಿಕೆ ಬಳಿಕ ಆಂಧ್ರಪ್ರದೇಶ, ತೆಲಂಗಾಣ, ಗೋವಾ ರಾಜ್ಯಗಳಿಗೆ ಅಂತರ್ ರಾಜ್ಯ ಬಸ್ ಸೇವೆ ಪುನರಾರಂಭಿಸಿದ್ದ ಕೆಎಸ್ಆರ್ಟಿಸಿ ಇದೀಗ ಪ್ರಯಾಣಿಕರ ಅನುಕೂಲಕ್ಕಾಗಿ ಸೋಮವಾರದಿಂದ ರಾಜ್ಯದ ವಿವಿಧ ಸ್ಥಳಗಳಿಂದ ಕೇರಳಕ್ಕೆ ಬಸ್ ಸೇವೆ ಪುನರಾರಂಭಿಸಿದೆ.

ಪ್ರಯಾಣಿಕರ ದಟ್ಟಣೆ ಹಾಗೂ ಅವಶ್ಯಕತೆಗೆ ಅನುಗುಣವಾಗಿ ಬೆಂಗಳೂರು, ಮೈಸೂರು, ಪುತ್ತೂರು ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಕೇರಳದ ವಿವಿಧ ಸ್ಥಳಗಳಿಗೆ ಬಸ್ ಕಾರ್ಯಾಚರಣೆ ಮಾಡಿದೆ. ಬಸ್ಸುಗಳಲ್ಲಿ ಕೇರಳದಿಂದ ಕರ್ನಾಟಕಕ್ಕೆ ಪ್ರಯಾಣಿಸುವ ಪ್ರಯಾಣಿಕರಿಗೆ 72 ಗಂಟೆಯೊಳಗೆ ಮಾಡಿಸಿರುವ ಕೋವಿಡ್ ನೆಗೆಟಿವ್ ಪರೀಕ್ಷಾ ವರದಿ ಅಥವಾ ಕನಿಷ್ಠ ಒಂದು ಡೋಸ್ ಕೊರೋನಾ ಲಸಿಕೆ ಪಡೆದಿರುವ ಪ್ರಮಾಣಪತ್ರ ಕಡ್ಡಾಯಗೊಳಿಸಲಾಗಿದೆ.
•             ಕೆಎಸ್ಆರ್ಟಿಸಿಯಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಕೇರಳಕ್ಕೂ ಸೇವೆ ಆರಂಭ
•             ಲಾಕ್ಡೌನ್ ಹಿನ್ನೆಲೆ ಸ್ಥಗಿತವಾಗಿದ್ದ ಕರ್ನಾಟಕ-ಕೇರಳ ಬಸ್ ಸೇವೆ
•             ಪ್ರಯಾಣಿಕರ ದಟ್ಟಣೆ ಹಾಗೂ ಅವಶ್ಯಕತೆಗೆ ಅನುಗುಣವಾಗಿ ಸಂಚಾರ
 ರಾಜ್ಯ ಸರ್ಕಾರದ ಅನ್ಲಾಕ್ ಮಾರ್ಗಸೂಚಿ ಅನ್ವಯ ನಿಗಮದ
ಇನ್ನು ವಿದ್ಯಾರ್ಥಿಗಳು, ಶಿಕ್ಷಣ, ವ್ಯವಹಾರ ಮತ್ತು ಇತರೆ ಕಾರಣಗಳಿಗಾಗಿ ಕರ್ನಾಟಕಕ್ಕೆ ದಿನನಿತ್ಯ ಪ್ರಯಾಣಿಸುವವರು 15 ದಿನಗಳಿಗೊಮ್ಮೆ ಆರ್ಟಿಪಿಸಿಆರ್ ಪರೀಕ್ಷೆ ಮಾಡಿಸಿ, ನೆಗೆಟಿವ್ ವರದಿ ಹೊಂದಿರಬೇಕು. ಅಂತೆಯೆ ಬಸ್ಸಿನಲ್ಲಿ ಪ್ರಯಾಣಿಸುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇದರೊಂದಿಗೆ ಕಡ್ಡಾಯವಾಗಿ ಕೊರೋನಾ ನಿಯಮಾವಳಿ ಪಾಲಿಸಬೇಕು ಎಂದು ಕೆಎಸ್ಆರ್ಟಿಸಿ ಪ್ರಯಾಣಿಕರಿಗೆ ಸೂಚಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ