ಸಚಿವ ಸಂಪುಟ ಸಭೆ : ಪ್ರಮುಖ ವಿಚಾರಗಳೇನು..?

ಗುರುವಾರ, 15 ಜುಲೈ 2021 (11:51 IST)
ಬೆಂಗಳೂರು (ಜು.15):  ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು 2022 ರ ಫೆಬ್ರವರಿಯಲ್ಲಿ ಆಯೋಜಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು,  ಈ ಸಮಾವೇಶದ ಬಗ್ಗೆ ಸಂಪುಟದಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ. 

ಈ ಕುರಿತು ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ  ನಿರ್ಧಾರ ಸಾಧ್ಯತೆ ಇದೆ.  ಅಲ್ಲದೇ ರಾಜ್ಯದಲ್ಲಿ ಆಕ್ಸಿಜನ್ ಘಟಕ ಆರಂಭಿಸಲು ವಿಶೇಷ ಪ್ರೋತ್ಸಾಹ ನೀಡುವುದು. ರಾಜ್ಯದಲ್ಲಿ 2021-22 ನೇ ಸಾಲಿನ ಬೆಳೆ ಸಮೀಕ್ಷೆಯ ಯೋಜನೆ ಜಾರಿ ಕುರಿತು ಚರ್ಚೆ ನಡೆಯಲಿದೆ.
•             ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು 2022 ವಿಚಾರ
•             ಫೆಬ್ರವರಿಯಲ್ಲಿ ಆಯೋಜಿಸಲು ರಾಜ್ಯ ಸರ್ಕಾರ ಚಿಂತನೆ
•             ಈ ಸಮಾವೇಶದ ಬಗ್ಗೆ ಸಂಪುಟದಲ್ಲಿ ಚರ್ಚೆಯಾಗುವ ಸಾಧ್ಯತೆ

ಗೋಹತ್ಯೆ ನಿಷೇಧ ಕಾಯ್ದೆ ಅನ್ವಯ ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಗೋ ಶಾಲೆ ತೆರೆಯಲು ಸಂಪುಟದ ಅನುಮತಿ ನೀಡುವ ಕುರಿತು ನಾಯಕರು ಚರ್ಚಿಸಲಿದ್ದಾರೆ.
ಇನ್ನು ಜೆಒಸಿ ಕೋರ್ಸ್ಗಳನ್ನು ಪಿಯುಸಿ ತತ್ಸಮಾನ ಎಂದು ಪರಿಗಣಿಸುವುದು.  ಜೀವಾವಧಿ ಶಿಕ್ಷೆಗೆ ಒಳಗಾಗಿರುವ 108 ಅಪರಾಧಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡುವುದು. ಕರ್ನಾಟಕ ಕಾರಾಗೃಹ ಅಭಿವೃದ್ಧಿ  ಮಂಡಳಿ ಮಾಡುವ ಕುರಿತು ಸಂಪುಟದಲ್ಲಿ ಚರ್ಚೆ ನಡೆಯಲಿದೆ.
ವರಿಷ್ಠರ ಭೇಟಿಗೆ ನಾಳೆ ಸಿಎಂ ಬಿಎಸ್ವೈ ದಿಲ್ಲಿಗೆ!
ಮೈಸೂರಿನ ಲಲಿತ ಮಹಲ್ ಪ್ಯಾಲೇಸ್ ನಿರ್ವಹಣೆಗೆ ಹೊಟೇಲ್ ಆಪರೇಟರನ್ನು ಆಯ್ಕೆ ಮಾಡುವ ಕುರಿತು,  ಕೊಪ್ಪಳ, ಹಾವೇರಿ ಹಾಗೂ ದಕ್ಷಿಣ ಕನ್ನಡ  ಜಿಲ್ಲೆಗಳಲ್ಲಿ ಜಾರಿಯಲ್ಲಿರುವ ವಿವಿಧ ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡುವ ಕುರಿತು ಸಂಪುಟ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.
ವಿಧಾನಸೌಧದ ಆವರಣದಲ್ಲಿ ಬಸವೇಶ್ವರ ಪ್ರತಿಮೆಯನ್ನು ಸ್ಥಾಪಿಸುವ ಕುರಿತಂತೆಯೂ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡುವ ಸಾಧ್ಯತೆ ಇದೆ. ಇಂದು ನಡೆಯುವ ಸಂಪುಟದಲ್ಲಿ ಈ ಎಲ್ಲಾ ವಿಚಾರಗಳು ಪ್ರಮುಖ ಚರ್ಚಾ ವಿಷಯಗಳಾಗುವ ಸಾಧ್ಯತೆಗಳಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ