ಬೆಂಗಳೂರು ಕೋರ್ಟ್ ಕಟ್ಟಡದ 5ನೇ ಮಹಡಿಯಿಂದ ಹಾರಿ ಖೈದಿ ಆತ್ಮಹತ್ಯೆಗೆ ಯತ್ನ!
ವಿಚಾರಣಾಧೀನ ಕೈದಿಯೊಬ್ಬ ಕೋರ್ಟ್ ಕಟ್ಟಡದ ೫ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಹೆತ್ತಮಕ್ಕಳನ್ನೇ ಹತ್ಯೆಗೈದ ಆರೋಪದಲ್ಲಿ ಬಂಧಿತನಾಗಿದ್ದ ಜತಿನ್ ಕುಮಾರ್ ಎಂಬಾತ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
೨೦೨೦ರಲ್ಲಿ ನಡೆದಿದ್ದ ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿದ್ದ ಹುಳಿಮಾವು ಪೊಲೀಸರು ಇಂದು ವಿಚಾರಣೆಗೆಗಾಗಿ ನ್ಯಾಯಾಲಯಕ್ಕೆ ಕರೆದು ತಂದಿದ್ದರು. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಂಡು ಜತಿನ್ ಮಹಡಿ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಜತಿನ್ ಕುಮಾರ್ ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.