ಬಳಿಕ ಮಾತನಾಡಿದ ಅವರು, ಮಹಿಳೆಯರ ಸಬಲೀಕರಣಕ್ಕೆ ಉತ್ತೇಜನ ನೀಡಲು ಸ್ವಸಹಾಯ ಸಂಘಗಳಲ್ಲಿ ಸಕ್ರಿಯರಾಗಿರುವ ಸ್ತೀ ಉದ್ಯಮಿಗಳಿಗೆ ಯಾವುದೇ ಖಾತ್ರಿ ಇಲ್ಲದೆ 1 ಕೋಟಿ ರೂ.ವರೆಗೂ ಬ್ಯಾಂಕ್ ಸಾಲ ಕೊಡಲಾಗುತ್ತಿದೆ. ಜೊತೆಗೆ, ಮಹಿಳೆಯರೇ ತಯಾರಿಸುತ್ತಿರುವ ಉತ್ಪನ್ನಗಳಿಗೆ ಸರಕಾರವೇ ಇ-ಕಾಮರ್ಸ್ ವೇದಿಕೆಯನ್ನು ಒದಗಿಸಲಿದೆ. ಅಲ್ಲದೆ, ಅಮೆಜಾನ್ ಮತ್ತು ಫ್ಲಿಪ್ ಕಾರ್ಟ್ ತರಹದ ಬಹುರಾಷ್ಟ್ರೀಯ ಕಂಪನಿಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು, ಮಾರುಕಟ್ಟೆ ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಅತ್ಯುತ್ತಮ ಶಿಕ್ಷಕಿಯರಿಗೆ ಸಚಿವರು ಪುರಸ್ಕಾರ ಪ್ರದಾನ ಮಾಡಿದರು. ಕಾರ್ಯಕ್ರಮದಲ್ಲಿ ಹೆಸರಾಂತ ವೈದ್ಯೆ ಡಾ.ವಿಜಯಲಕ್ಷ್ಮಿ ಬಾಳೇಕುಂದ್ರಿ, ಮುಖಂಡರಾದ ಗಿರೀಶ್, ಚನ್ನೇಗೌಡ ಮುಂತಾದವರು ಉಪಸ್ಥಿತರಿದ್ದರು.