ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಕಾರು ಚಾಲಕನ ಮೇಲೆ ಚಾಕು ಇರಿತ
ಗಾಯಗೊಂಡ ಬಸವಂತ ಅವರನ್ನು ಕೂಡಲೇ ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಗೆ ಡಿಸಿಪಿ, ಎಸಿಪಿ ಹಾಗೂ ಮೃಣಾಲ್ ಹೆಬ್ಬಾಳ್ಕರ್ ಆಗಮಿಸಿದ್ದಾರೆ. ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹಲವು ವರ್ಷಗಳಿಂದ ಬಸವಂತ ಕಡೋಲ್ಕರ್ ಮೃಣಾಲ್ ಅವರ ಕಾರು ಚಾಲಕರಾಗಿ ಕೆಲಸ ಮಾಡುತ್ತಿದ್ದ ಮಾಹಿತಿ ಲಭ್ಯವಾಗಿದೆ.