ಮಹದಾಯಿ: ಇಂದು ಸಂಜೆ ಸರ್ವಪಕ್ಷ ಸಭೆ

ಬುಧವಾರ, 19 ಅಕ್ಟೋಬರ್ 2016 (11:52 IST)
ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆಯ ವಿವಾದದಂತೆ ಮಹದಾಯಿ ಯೋಜನೆ ಅನುಷ್ಠಾನದ ವಿಷಯವು ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಮೂರೂ ರಾಜ್ಯದ ಮುಖ್ಯಮಂತ್ರಿಗಳು ನ್ಯಾಯಾಧಿಕರಣದ ಹೊರಗೆ ಸಮಸ್ಯೆ ಪರಿಹರಿಸಿಕೊಳ್ಳಲು ನ. 21 ರಂದು  ಮಹಾರಾಷ್ಟ್ರದಲ್ಲಿ ಸಭೆ ನಡೆಸಲಿದ್ದಾರೆ. ಈ ಸಭೆಗೆ ಪೂರ್ವಭಾವಿಯೆಂಬಂತೆ ರಾಜ್ಯ ಸರಕಾರ ಇಂದು ಸಾಯಂಕಾಲ ಆರು ಗಂಟೆಗೆ ಸರ್ವಪಕ್ಷ ಸಭೆ ಕರೆದಿದೆ.

ರಾಜಕೀಯ ನಾಯಕರ ಸಮ್ಮುಖದಲ್ಲಿ ಮಹದಾಯಿ ಯೋಜನೆ ಅನುಷ್ಠಾನದ ಕುರಿತಾಗಿರುವ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಲಿದೆ. ಮಹರಾಷ್ಟ್ರದಲ್ಲಿ ನಡೆಯಲಿರುವ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ, ಯಾವ ಅಂಶಗಳನ್ನು ಮುಂದಿಟ್ಟುಕೊಂಡು ಗಟ್ಟಿಯಾಗಿ ಪ್ರತಿಪಾದಿಸಬೇಕು ಎನ್ನುವ ಕುರಿತು ಚರ್ಚೆ ನಡೆಯಲಿದೆ. ಅಲ್ಲದೆ, ಕುಡಿಯುವ ನೀರಿಗಾಗಿ ಗೋವಾ, ಮಹಾರಾಷ್ಟ್ರ ಮುಖ್ಯಮಂತ್ರಿಗಳನ್ನು ಹೇಗೆ ಮನವೊಲಿಸಬೇಕು ಎನ್ನುವ ಸಲಹೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಕ್ಷದ ನಾಯಕರಿಂದ ಪಡೆಯಲಿದ್ದಾರೆ ಎನ್ನಲಾಗುತ್ತಿದೆ.

ನ್ಯಾಯಾಧಿಕರಣದ ತೀರ್ಪು ಬರುವ ತನಕ್ಕೆ ಕನಿಷ್ಠ 7 ಟಿ.ಎಂ.ಸಿ. ನೀರನ್ನಾದರೂ ಕಳಸಾ-ಬಂಡೂರಿ ನಾಲಾ ಮೂಲಕ ಮಲಪ್ರಭೆ ಅಚ್ಚುಕಟ್ಟು ಪ್ರದೇಶಕ್ಕೆ ಬಿಡಿ ಎನ್ನುವುದು ಕರ್ನಾಟಕದ ವಾದ. ಆದರೆ, ಗೋವಾ ಸರಕಾರ ಈ ಯೋಜನೆಗೆ ಒಪ್ಪಿಗೆ ನೀಡಿದರೆ ಕಾಮಗಾರಿಯಿಂದ ಅತ್ಯಮೂಲ್ಯ ವನ್ಯ ಸಂಪತ್ತು ನಾಶವಾಗುವುದಲ್ಲದೆ, ಹರಿದು ಹೋಗುವ ನೀರಿನ ಪ್ರಮಾಣ ಕಡಿಮೆಯಾಗಿ ಅಲ್ಲಿರುವ ವನ್ಯ ಜೀವಿ ಹಾಗೂ ಪಕ್ಷಿ ಸಂಕುಲಗಳು ಅವಸಾನದಂಚಿಗೆ ತಲುಪುತ್ತವೆ ಎಂದು ತನ್ನ ವಾದ ಮುಂದಿಡುತ್ತಿದೆ. ಈ ಹಿನ್ನೆಲೆಯಲ್ಲಿ ಮೂರು ರಾಜ್ಯಗಳ ಮುಖ್ಯಂತ್ರಿಗಳ ಸಭೆ ಅತ್ಯಂತ ಮಹತ್ವ ಪಡೆದುಕೊಂಡಿದೆ.

ಇಂದು ನಡೆಯುವ ಸರ್ವಪಕ್ಷದ ಸಭೆಗೆ ಪೂರಕವಾಗಿ ಧಾರವಾಡದಲ್ಲಿ ಉತ್ತರ ಕರ್ನಾಟಕದ ಭಾಗದ ಮಠಾಧೀಶರು ಮಂಗಳವಾದ ದುಂಡು ಮೇಜಿನ ಸಭೆ ಕರೆದು, ಜಲ ಹಾಗೂ ಕಾನೂನು ತಜ್ಞರ ಸಲಹೆ ಪಡೆದು ಮುಖ್ಯಮಂತ್ರಿ ವಾದ ಮಂಡಿಸಬೇಕು ಎಂದು ಆಗ್ರಹಿಸಿದ್ದಾರೆ. ನಲವತ್ತು ವರ್ಷಗಳ ಸುದೀರ್ಘ ಹೋರಾಟದಲ್ಲಿ ಇದೇ ಮೊತ್ತ ಮೊದಲ ಬಾರಿಗೆ ಮೂರು ರಾಜ್ಯದ ಮುಖ್ಯಮಂತ್ರಿಗಳು ಒಂದೆಡೆ ಸೇರುತ್ತಿರುವುದರಿಂದ, ಮಲಪ್ರಭೆ ಮಕ್ಕಳಲ್ಲಿ ಹೊಸ ಭರಸವೆ ಮೂಡಿದಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಮಹದಾಯಿ: ಸಂಜೆ ಸರ್ವಪಕ್ಷ ಸಭೆ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆಯ ವಿವಾದದಂತೆ ಮಹದಾಯಿ ಯೋಜನೆ ಅನುಷ್ಠಾನದ ವಿಷಯವು ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಮೂರೂ ರಾಜ್ಯದ ಮುಖ್ಯಮಂತ್ರಿಗಳು ನ್ಯಾಯಾಧಿಕರಣದ ಹೊರಗೆ ಸಮಸ್ಯೆ ಪರಿಹರಿಸಿಕೊಳ್ಳಲು ನ. 21 ರಂದು  ಮಹಾರಾಷ್ಟ್ರದಲ್ಲಿ ಸಭೆ ನಡೆಸಲಿದ್ದಾರೆ.

ಈ ಸಭೆಗೆ ಪೂರ್ವಭಾವಿಯೆಂಬಂತೆ ರಾಜ್ಯ ಸರಕಾರ ಇಂದು ಸಾಯಂಕಾಲ ಆರು ಗಂಟೆಗೆ ಸರ್ವಪಕ್ಷ ಸಭೆ ಕರೆದಿದೆ. ರಾಜಕೀಯ ನಾಯಕರ ಸಮ್ಮುಖದಲ್ಲಿ ಮಹದಾಯಿ ಯೋಜನೆ ಅನುಷ್ಠಾನದ ಕುರಿತಾಗಿರುವ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಲಿದೆ. ಮಹರಾಷ್ಟ್ರದಲ್ಲಿ ನಡೆಯಲಿರುವ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ, ಯಾವ ಅಂಶಗಳನ್ನು ಮುಂದಿಟ್ಟುಕೊಂಡು ಗಟ್ಟಿಯಾಗಿ ಪ್ರತಿಪಾದಿಸಬೇಕು ಎನ್ನುವ ಕುರಿತು ಚರ್ಚೆ ನಡೆಯಲಿದೆ. ಅಲ್ಲದೆ, ಕುಡಿಯುವ ನೀರಿಗಾಗಿ ಗೋವಾ, ಮಹಾರಾಷ್ಟ್ರ ಮುಖ್ಯಮಂತ್ರಿಗಳನ್ನು ಹೇಗೆ ಮನವೊಲಿಸಬೇಕು ಎನ್ನುವ ಸಲಹೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಕ್ಷದ ನಾಯಕರಿಂದ ಪಡೆಯಲಿದ್ದಾರೆ ಎನ್ನಲಾಗುತ್ತಿದೆ.

ವೆಬ್ದುನಿಯಾವನ್ನು ಓದಿ