ರಾತ್ರಿ 1 ಗಂಟೆಯವರೆಗೂ ಜನಾಶೀರ್ವಾದ ಯಾತ್ರೆ ಸಭೆ: ಪೊಲೀಸ್ ದೂರು ದಾಖಲು
ಕೋವಿಡ್ ನಿಯಮ ಉಲ್ಲಂಘಿಸಿ ರಾಯಚೂರಿನಲ್ಲಿ ನಡೆದ ಜನಾರ್ಶೀವಾದ ಯಾತ್ರೆ ಕಾರ್ಯಕ್ರಮ ಆಯೋಜಕರ ಹಾಗೂ ಕಲ್ಯಾಣ ಮಂಟಪ ಮಾಲೀಕರ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ನಗರದ ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ ಕಲ್ಯಾಣ ಮಂಟಪ ಹಾಗೂ ಕಾರ್ಯಕ್ರಮದ ಆಯೋಜಕರು ಸೇರಿದಂತೆ ಐದಾರು ಜನರ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ನಿನ್ನೆ ರಾಯಚೂರು ನಗರದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ನೇತೃತ್ವದಲ್ಲಿ ಜನಾರ್ಶೀವಾದ ಯಾತ್ರೆ ಆಯೋಜಿಸಲಾಗಿತ್ತು.
ಕಾರ್ಯಕ್ರಮ ನಿಗದಿ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಸಂಜೆ 7 ಸಮಯಕ್ಕೆ ನಡೆಯಬೇಕಾಗಿತ್ತು. ಆದರೆ ತಡವಾಗಿ ಆರಂಭಿಸುವ ಮೂಲಕ ರಾತ್ರಿ 1 ಗಂಟೆಯವರೆಗೆ ಬಿಜೆಪಿ ಕಾರ್ಯಕರ್ತರ ಸಭೆ ಕೇಂದ್ರ ಸಚಿವ ಭಗವಂತ ಖೂಬಾ ನೇತೃತ್ವದಲ್ಲಿ ನಡೆಯಿತ್ತು.
ಈ ಮೂಲಕ ಕೋವಿಡ್ ನಿಯಮ ಮತ್ತು ನೈಟ್ ಕರ್ಫು ಉಲ್ಲಂಘನೆಯಾಗಿದ್ದು, ಹೀಗಾಗಿ ನಗರದ ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ ಸಭೆಯ ಆಯೋಜಕರು ಮತ್ತು ಕಲ್ಯಾಣ ಮಂಟಪದ ಮಾಲೀಕರ ವಿರುದ್ದ ದೂರನ್ನ ದಾಖಲಿಸಲಾಗಿದ್ದೆ. ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕ್ಕಂ ಸ್ಪಷ್ಟಪಡಿಸಿದ್ದಾರೆ.