ಕಾಲೇಜು ವಿದ್ಯಾರ್ಥಿಗಳಿಗೆ ಶೀಘ್ರದಲ್ಲೇ ಲಸಿಕೆ: ಡಿಸಿಎಂ

ಬುಧವಾರ, 30 ಜೂನ್ 2021 (09:27 IST)
ಬೆಂಗಳೂರು : ಇನ್ನು 10 ದಿನದೊಳಗೆ ರಾಜ್ಯದ ಎಲ್ಲ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುವುದು. ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಜವಾಬ್ದಾರಿಯನ್ನು ಆಯಾ ಕಾಲೇಜು ಪ್ರಾಂಶುಪಾಲರಿಗೆ ನೀಡಲಾಗುವುದು ಎಂದು ಡಿಸಿಎಂ ಅಶ್ವಥ್ನಾರಾಯಣ ತಿಳಿಸಿದ್ದಾರೆ.
 ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯವನ್ನು ಪರಿಣಾಮಕಾರಿಯಾಗಿ ಮಾಡಲಾಗುವುದು. ಎಲ್ಲಾ ವಿದ್ಯಾರ್ಥಿಗಳಿಗೂ ಲಸಿಕೆ ಸಿಗುವಂತೆ ನೋಡಿಕೊಳ್ಳಲಾಗುವುದು. ಈಗಾಗಲೇ ಲಸಿಕೆಯನ್ನು ಸಮಪರ್ಕವಾಗಿ ರಾಜ್ಯ ನೀಡುತ್ತಿದೆ. ದೇಶದಲ್ಲಿಯೇ ನಾವು ಲಸಿಕೆ ನೀಡುವಿಕೆಯಲ್ಲಿ ಮೂರನೇ ಸ್ಥಾನದಲ್ಲಿ ಕರ್ನಾಟಕವಿದೆ ಎಂದು ಅವರು ತಿಳಿಸಿದರು.
 
ಈಗಾಗಲೇ 18 ವರ್ಷ ಮೀರಿದ ಎಲ್ಲ ಕಾಲೇಜು ವಿದ್ಯಾರ್ಥಿಗಳು ಮತ್ತು ಕಾಲೇಜು ಸಿಬ್ಬಂದಿಗಳು ಲಸಿಕೆ ಪಡೆಯಬೇಕು ಎಂದು ಆದೇಶ ನೀಡಲಾಗಿದೆ, ಕಾಲೇಜಿಗೆ ಬರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಒಂದು ಡೋಸ್ ಲಸಿಕೆ ಪಡೆದಿರಬೇಕು. ಇಲ್ಲವಾದರೆ, ಪ್ರವೇಶ ನಿರಾಕರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರು ಆದ ಡಿಸಿಎಂ ಅಶ್ವತ್ಥ್ ನಾರಾಯಣ ತಿಳಿಸಿದ್ದರು.

ಕೋವಿಡ್ ಸೋಂಕಿನ ಅಲೆ ಕಡಿಮೆಯಾಗಿರುವ ಹಿನ್ನಲೆ ಕಾಲೇಜು ಪುನರ್ ಆರಂಭಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಇದೇ ಹಿನ್ನಲೆ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲು ಸರ್ಕಾರ ಮುಂದಾಗಿದೆ. ಈಗಾಗಲೇ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ತೊರೆಯುತ್ತಿದ್ದು, ಈಗ ಈ ಹೊಣೆಯನ್ನು ಕಾಲೇಜು ಪ್ರಾಶುಂಪಾಲರ ಹೆಗಲಿಗೆ ಹಾಕಲಾಗಿದೆ. ಕಾಲೇಜಿನಲ್ಲಿ ಸಾಮೂಹಿಕವಾಗಿ ಲಸಿಕೆ ಹಾಕಲು ಸಿದ್ದತೆ ನಡೆಸಲಾಗಿದೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ