ವಿಶೇಷ ವರದಿ: ರೇಷ್ಮೆ ಕೃಷಿಯತ್ತ ಚಾಮರಾಜನಗರ ರೈತರ ಒಲವು
ನಂದಿ ಬೆಟ್ಟ, ಚನ್ನರಾಯಸ್ವಾಮಿ ಬೆಟ್ಟದ ಸಾಲಿನಲ್ಲಿ ಬರುವ ಸೀಗೆಹಳ್ಳಿ ಗ್ರಾಮದ ರತ್ಮಮ್ಮ ರಾಮಯ್ಯ ರಾಜ್ಯ ಮಟ್ಟದ ಸಾಧನೆ ಮಾಡಿ ದೊಡ್ಡಬಳ್ಳಾಪುರ ತಾಲೂಕಿಗೆ ಮಾದರಿಯಾಗಿದ್ದಾರೆ. 2020-21ನೇ ಸಾಲಿನಲ್ಲಿ ಕೇವಲ 1 ಎಕರೆ ಪ್ರದೇಶದಲ್ಲಿ ವಾರ್ಷಿಕವಾಗಿ ಉತ್ಪದನಾ ವೆಚ್ಚವನ್ನು ಹೊರತುಪಡಿಸಿ 3.83ಲಕ್ಷ ರೂಪಾಯಿ ಲಾಭ ಪಡೆಯುತ್ತಿದ್ದಾರೆ.
ರೈತರು ಸಾಲ ಮಾಡಿ ಆತ್ಮಹತ್ಯೆಗಳನ್ನು ಮಾಡಿಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಇಂತಹ ಸಾಧಕ ರೈತರು ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡು, ರೇಷ್ಮೆ ಇಲಾಖೆ ಅಧಿಕಾರಿಗಳ ಸಲಹೆಗಳನ್ನು ಚಾಚು ತಪ್ಪದೆ ಪಾಲಿಸುವ ಮೂಲಕ ನಮ್ಮನ್ನು ನಾವು ಸಮರ್ಥವಾಗಿ ಆರ್ಥಿಕವಾಗಿ ಕಟ್ಟಿಕೊಳ್ಳಬಹುದು ಎಂಬ ಅವರ ಸಾಧನೆ ಎಲ್ಲಾ ರೈತರಿಗೂ ಮಾದರಿಯಾಗಬೇಕಿದೆ.