ಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಆಗಸ್ಟ್ 5 ಮತ್ತು 6ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಬುಧವಾರ ನೈರುತ್ಯ ಮುಂಗಾರು ಚುರುಕಾಗಿತ್ತು. ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯ ಹಾಗೂ ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗಿದೆ.
ಹಲವೆಡೆ ಭಾರಿ ಮಳೆ:
ಉಡುಪಿಯ ಸಿದ್ದಾಪುರ ಮತ್ತು ಶಿವಮೊಗ್ಗದ ಆಗುಂಬೆಯಲ್ಲಿ ತಲಾ 15 ಸೆಂ.ಮೀ., ದಕ್ಷಿಣ ಕನ್ನಡದ ಸುಬ್ರಹ್ಮಣ್ಯದಲ್ಲಿ 13 ಸೆಂ.ಮೀ., ಶಿವಮೊಗ್ಗದ ತುಮರಿಯಲ್ಲಿ 12 ಸೆಂ.ಮೀ., ಶಿರಾಲಿಯಲ್ಲಿ 10 ಸೆಂ.ಮೀ., ಲಿಂಗನಮಕ್ಕಿ, ತೀರ್ಥಹಳ್ಳಿ, ಭಟ್ಕಳ, ಕೋಟದಲ್ಲಿ ತಲಾ 9 ಸೆಂ.ಮೀ., ಹೊನ್ನಾವರ, ಉತ್ತರ ಕನ್ನಡದ ಸಿದ್ದಾಪುರ, ಮಂಕಿ, ತಾಳಗುಪ್ಪ, ಚಿಕ್ಕಮಗಳೂರಿನ ಜಯಪುರ ಹಾಗೂ ಕೊಡಗಿನ ಸಂತಹಳ್ಳಿಯಲ್ಲಿ ತಲಾ 7 ಸೆಂ.ಮೀ., ಮಳೆಯಾಗಿದೆ ಎಂದು ಮಹಿತಿ ನೀಡಿದ್ದಾರೆ.