ಅಮೇಥಿಯಿಂದ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ

ಶನಿವಾರ, 12 ಏಪ್ರಿಲ್ 2014 (18:43 IST)
PTI
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಇಂದು ಅಮೇಥಿ ಲೋಕಸಭೆ ಕ್ಷೇತ್ರದಿಂದ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.

ರಾಹುಲ್‌ರೊಂದಿಗೆ ತಾಯಿ ಸೋನಿಯಾ ಮತ್ತು ಸಹೋದರಿ ಪ್ರಿಯಾಂಕಾ ಗಾಂಧಿ ಉಪಸ್ಥಿತರಿದ್ದರು.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸುಲ್ತಾನಪುರದಿಂದ ಅಮೇಥಿಯ ಗೌರಿಗಂಜ್‌ವರೆಗೆ ರೋಡ್‌ಶೋ ಕಾರ್ಯಕ್ರಮ ನಡೆಸಿ ನಂತರ ಜಿಲ್ಲಾ ದಂಡಾಧಿಕಾರಿಗಳ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ನಾಮಪತ್ರ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ರಾಯಬರೇಲಿ ಕ್ಷೇತ್ರದಿಂದ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.

ಅಮೇಥಿ ಲೋಕಸಭೆ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಆಮ್ ಆದ್ಮಿ ಪಕ್ಷದ ಕುಮಾರ್ ವಿಶ್ವಾಸ್ ಮತ್ತು ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಕಣಕ್ಕಿಳಿದಿದ್ದಾರೆ.

ಕಳೆದ ಎರಡು ತಿಂಗಳುಗಳಿಂದ ಆಮ್ ಆದ್ಮಿ ಪಕ್ಷದ ಮುಖಂಡ ಕುಮಾರ್ ವಿಶ್ವಾಸ್ ಅಮೇಥಿಯಲ್ಲಿ ಬೀಡು ಬಿಟ್ಟು ಪ್ರಚಾರ ನಡೆಸುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಕೆಲ ದಿನಗಳಿಂದ ಅಮೇಥಿಯಲ್ಲಿ ಠೀಕಾಣಿ ಹೂಡಿದ್ದಾರೆ.

ವೆಬ್ದುನಿಯಾವನ್ನು ಓದಿ