ಕಾಂಗ್ರೆಸ್ ಪಕ್ಷ ಸೇರಿದ ಬಿಜೆಪಿ ಸಚಿವರ ಸಹೋದರ

ಮಂಗಳವಾರ, 18 ಮಾರ್ಚ್ 2014 (16:37 IST)
PTI
ಮಧ್ಯಪ್ರದೇಶದ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ವಿಜಯ್ ಶಹಾ ಅವರ ಹಿರಿಯ ಸಹೋದರ ಅಜಯ್ ಶಾಹ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಅರುಣ್ ಯಾದವ್ ಮತ್ತು ಮಧ್ಯಪ್ರದೇಶ ವಿಧಾನಸಭೆಯ ವಿಪಕ್ಷ ನಾಯಕ ಸತ್ಯದೇವ್ ಕಟಾರೆಯವರ ಸಮ್ಮುಖದಲ್ಲಿ ಅಜಯ್ ಶಾಹ ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ.

ಬಿಜೆಪಿ ಸಚಿವನ ಸಹೋದರರಾದ ಅಜಯ್ ಶಾಹ ಕೆನರಾ ಬ್ಯಾಂಕ್‌ನಲ್ಲಿ ಸಹಾಯಕ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಇದೀಗ ಸ್ವಯಂ ನಿವೃತ್ತಿಯನ್ನು ಪಡೆದು ಕಾಂಗ್ರೆಸ್ ಪಕ್ಷದತ್ತ ವಾಲಿದ್ದಾರೆ.

ವೆಬ್ದುನಿಯಾವನ್ನು ಓದಿ