ಗುಜರಾತ್ ಮಾಡೆಲ್ ಬಲೂನ್ ಈ ಬಾರಿಯೂ ಟುಸ್ ಎನ್ನುತ್ತದೆ: ರಾಹುಲ್ ಗಾಂಧಿ

ಶನಿವಾರ, 29 ಮಾರ್ಚ್ 2014 (13:10 IST)
PTI
ಕಳೆದ 2004ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಭಾರತ ಶೈನಿಂಗ್ ಎನ್ನುವ ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದ ಮತದಾರರು, ಇದೀಗ ಗುಜರಾತ್ ಅಭಿವೃದ್ಧಿ ಮಾದರಿ ಎನ್ನುವ ಮೋದಿ ಬಲೂನ್‌ಗೆ ಜನತೆ ಪಂಕ್ಚರ್ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಲೇವಡಿ ಮಾಡಿದ್ದಾರೆ.

2004 ಮತ್ತು 2009ರಲ್ಲಿ ಎನ್‌ಡಿಎ ಘೋಷಣೆಯಾದ ಭಾರತ ಶೈನಿಂಗ್ ಘೋಷಣೆಯನ್ನು ತಿರಸ್ಕರಿಸಿದ್ದಾರೆ. ಈ ಬಾರಿಯೂ ಮೋದಿಯವರನ್ನು ಜನತೆ ಸಂಪೂರ್ಣವಾಗಿ ತಿರಸ್ಕರಿಸಲಿದ್ದಾರೆ. ಚುನಾವಣೆಯ ನಂತರ ಮತ್ತೆ ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಸರಕಾರ ರಚಿಸಲಿದೆ ಎಂದರು.

ದೇಶದಲ್ಲಿ ಸುದಾರಣೆ ತರುವಲ್ಲಿ ಅಥವಾ ಅಭಿವೃದ್ಧಿಪಡಿಸುವುದು ಒಬ್ಬ ವ್ಯಕ್ತಿಯಿಂದ ಸಾಧ್ಯವಿಲ್ಲ. ಪ್ರತಿಯೊಬ್ಬರು ಕೈ ಜೋಡಿಸಿದಾಗ ಮಾತ್ರ ಅಭಿವೃದ್ಧಿಯಾಗುತ್ತದೆ. ಒಬ್ಬ ವ್ಯಕ್ತಿ ದೇಶ ಮುನ್ನಡೆಸಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು.

ಭ್ರಷ್ಟಾಚಾರದ ಬಗ್ಗೆ ಬಿಜೆಪಿ ಸದಾ ದಂದ್ವ ನಿಲುವು ಅನುಸರಿಸುತ್ತಾ ಬಂದಿದೆ. ಕೇಂದ್ರದಲ್ಲಿನ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತದೆ. ಆದರೆ, ಕರ್ನಾಟಕ ಮತ್ತು ಮಧ್ಯಪ್ರದೇಶ, ಗುಜರಾತ್ ಹಾಗೂ ಚತ್ತೀಸ್‌ಗಡ್ ರಾಜ್ಯಗಳಲ್ಲಿರುವ ಬಿಜೆಪಿ ನಾಯಕರ ಭ್ರಷ್ಟಾಚಾರ ಬಗ್ಗೆ ಮೌನವಾಗಿರುತ್ತದೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭ್ರಷ್ಟಾಚಾರದ ಆರೋಪದ ಮೇಲೆ ಜೈಲಿಗೆ ಹೋಗಿ ಬಂದಿದ್ದಾರೆ. ಅಂತಹ ವ್ಯಕ್ತಿಗಳ ಬಗ್ಗೆ ಮೋದಿ ಯಾಕೆ ಮೌನವಾಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ವೆಬ್ದುನಿಯಾವನ್ನು ಓದಿ