ನರೇಂದ್ರ ಮೋದಿ ವಿರುದ್ಧ ಕಣಕ್ಕಿಳಿಯಲು ಸಿದ್ದ: ದಿಗ್ವಿಜಯ್ ಸಿಂಗ್ ಘೋಷಣೆ

ಬುಧವಾರ, 19 ಮಾರ್ಚ್ 2014 (18:43 IST)
PTI
ವಾರಣಾಸಿಯಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸಲು ಅವಕಾಶ ನೀಡುವಂತೆ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಪಕ್ಷದ ಹೈಕಮಾಂಡ್‌ಗೆ ಮನವಿ ಸಲ್ಲಿಸಿದ್ದಾರೆ.

ಒಂದು ವೇಳೆ ದಿಗ್ವಿಜಯ್ ಸಿಂಗ್ ಪ್ರಸ್ತಾವನೆಯನ್ನು ಕಾಂಗ್ರೆಸ್ ಹೈಕಮಾಂಡ್ ಒಪ್ಪಿದಲ್ಲಿ, ಬಿಜೆಪಿ ಪ್ರಧಾನಿ ಅಭ್ಯರ್ಥಿ ಮೋದಿ ವಿರುದ್ಧ ಕಣಕ್ಕಿಳಿಯಲಿದ್ದಾರೆ.

64 ವರ್ಷ ವಯಸ್ಸಿನ ನರೇಂದ್ರ ಮೋದಿ ಪ್ರಧಾನಿ ಹುದ್ದೆ ರೇಸ್‌ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ ಎಂದು ಹಲವಾರು ಸಮೀಕ್ಷೆಗಳು ವರದಿಯಲ್ಲಿ ಬಹಿರಂಗಪಡಿಸಿವೆ.

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಕೂಡಾ ನರೇಂದ್ರ ಮೋದಿ ವಿರುದ್ಧ ಕಣಕ್ಕಿಳಿಯುವ ಇಂಗಿತ ವ್ಯಕ್ತಪಡಿಸಿದ್ದಾರೆ. ಆದರೆ, ವಾರಣಾಸಿಯಲ್ಲಿ ಮಾರ್ಚ್ 25 ರಂದು ನಡೆಯಲಿರುವ ಸಾರ್ವಜನಿಕ ಸಭೆಯ ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ