ಲೋಕಸಭೆ ಚುನಾವಣೆ: 22 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಗುರುವಾರ, 20 ಮಾರ್ಚ್ 2014 (13:14 IST)
PTI
ಕರ್ನಾಟಕ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಇಲ್ಲಿಯವರೆಗೆ 22 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣೆ ಆಯೋಗದ ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ಏಪ್ರಿಲ್ 17 ರಂದು 28 ಕ್ಷೇತ್ರಗಳಿಗೆ ಏಕಹಂತದ ಮತದಾನ ನಡೆಯಲಿದೆ

ಪ್ರಮುಖ ಅಭ್ಯರ್ಥಿಗಳಲ್ಲಿ ಕೋಲಾರದಿಂದ ಕಾಂಗ್ರೆಸ್ ಅಭ್ಯರ್ಥಿ ಕೇಂದ್ರ ಸಚಿವ ಕೆ.ಎಚ್‌.ಮುನಿಯಪ್ಪ ಬೆಂಗಳೂರು ದಕ್ಷಿಣದಿಂದ ಬಿಜೆಪಿ ಮುಖಂಡ ಅನಂತಕುಮಾರ್ ಬೆಂಗಳೂರು ಸೆಂಟ್ರಲ್‌ದಿಂದ ಬಿಜೆಪಿ ಅಭ್ಯರ್ಥಿ ಪಿ.ಸಿ. ಮೋಹನ್, ಉಡುಪಿ-ಚಿಕ್ಕಮಗಳೂರಿನಿಂದ ಮಾಜಿ ಶೋಭಾ ಕರಂದ್ಲಾಜೆ ನಾಮಪತ್ರ ಸಲ್ಲಿಸಿದ್ದಾರೆ.

ಅನಂತಕುಮಾರ್ ಕಾಂಗ್ರೆಸ್ ಎದುರಾಳಿ ಇನ್ಫೋಸಿಸ್ ಸಹ ಸಂಸ್ಥಾಪಕ ನಂದನ್ ನಿಲೇಕಣಿ ಮತ್ತು ಆಮ್ ಆದ್ಮಿ ಪಕ್ಷದ ನೀನಾ ನಾಯಕ್ ಅವರನ್ನು ಎದುರಿಸಲಿದ್ದಾರೆ.

ಹಾವೇರಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಿ.ಎಮ್.ಜಯದೇವ್ ನಾಮಪತ್ರ ಸಲ್ಲಿಸದವರಾಗಿದ್ದಾರೆ.

ಶಿವಮೊಗ್ಗದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಜುನಾಥ್ ಭಂಡಾರಿ ನಾಮಪತ್ರ ಸಲ್ಲಿಸಿದ್ದು, ಬಿಜೆಪಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಮತ್ತು ಜೆಡಿಎಸ್‌ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರನ್ನು ಎದುರಿಸಲಿದ್ದಾರೆ.

ಇಲ್ಲಿಯವರೆಗೆ 8 ಮಂದಿ ಅಭ್ಯರ್ಥಿಗಳು ಸ್ವತಂತ್ರವಾಗಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಎ.ಕೃಷ್ಣಪ್ಪ ತುಮಕೂರು ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.ಮತ್ತೊಂದೆಡೆ ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.

ಏಪ್ರಿಲ್ 17 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ 28 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಕಳೆದ 2009ರ ಚುನಾವಣೆಯಲ್ಲಿ ಬಿಜೆಪಿ 19 ಕ್ಷೇತ್ರಗಳಲ್ಲಿ ಜಯಗಳಿಸಿತ್ತು. ಕಾಂಗ್ರೆಸ್ 6 ಕ್ಷೇತ್ರ ಮತ್ತು ಜೆಡಿಎಸ್ ಕ್ಷೇತ್ರ ಮೂರು ಸ್ಥಾನಗಳಲ್ಲಿ ಜಯಗಳಿಸಿತ್ತು.

ಮಾರ್ಚ್ 26 ನಾಮಪತ್ರ ಸಲ್ಲಿಸಲು ಅಂತಿಮ ದಿನಾಂಕವಾಗಿದ್ದು, ಮಾರ್ಚ್ 27 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಮಾರ್ಚ್ 29ರವರೆಗೆ ನಾಮಪತ್ರ ಹಿಂಪಡೆಯುವ ಕೊನೆಯ ದಿನಾಂಕವಾಗಿದೆ.

ರಾಜಕೀಯ ಪಕ್ಷಗಳು ಮತ್ತು ಸ್ವತಂತ್ರ ಅಭ್ಯರ್ಥಿಗಳಿಗೆ ಲೋಕಸಭಾ ಚುನಾವಣೆಯ ಪ್ರಚಾರ ಕಾರ್ಯ ಏಪ್ರಿಲ್ 15ಕ್ಕೆ ಅಂತ್ಯಗೊಳ್ಳಲಿದೆ.

ವೆಬ್ದುನಿಯಾವನ್ನು ಓದಿ