ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರು ವಿನಾಕಾರಣ ಜಾತಿ ರಾಜಕಾರಣ ಮಾಡುತ್ತಿದ್ದಾರೆ. ಹೀಗಂತ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ದೂರಿದ್ದಾರೆ.
ಬಿಜೆಪಿಯ ಶಾಸಕ ಅರವಿಂದ ಬೆಲ್ಲದ ಜಾತಿಯ ಕುರಿತಾಗಿ ಸಭೆ ನಡೆಸಿ ಮೈತ್ರಿ ಪಕ್ಷದ ಅಭ್ಯರ್ಥಿ ವಿನಯ ಕುಲಕರ್ಣಿ ಬಗ್ಗೆ ಆಪಾದನೆ ಮಾಡುವುದು ಸರಿಯಲ್ಲ ಎಂದು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಲಿಂಗಾಯತ ಧರ್ಮದ ಹೋರಾಟದ ಅಸ್ತ್ರವನ್ನು ಹಿಡಿದು ಬಿಜೆಪಿಯವರು ರಾಜಕಾರಣ ಮಾಡುತ್ತಿರುವುದು ಖಂಡನೀಯವಾಗಿದೆ. ಅಲ್ಲದೇ ಮಠ ಮಾನ್ಯಗಳು ಎಲ್ಲರಿಗೂ ಸಮಾನವಾಗಿದೆ.
ಈ ಹಿನ್ನೆಲೆಯಲ್ಲಿ ಬಿಜೆಪಿಯವರು ಮೈತ್ರಿ ಪಕ್ಷದ ಕುರಿತು ಅವಹೇಳನಕಾರಿಯಾಗಿ ಮಾತನಾಡುವುದು ಸರಿಯಲ್ಲ ಎಂದು ಕಿಡಿಕಾರಿದರು. ಪ್ರಹ್ಲಾದ್ ಜೋಶಿಯವರಿಂದ ಲಿಂಗಾಯತ ಧರ್ಮಕ್ಕೆ ಅನ್ಯಾಯವಾಗಿದೆ ಎಂದಿರುವ ವಿನಯ ಕುಲಕರ್ಣಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ಕಾಂಗ್ರೆಸ್ ಪಕ್ಷ ಲಿಂಗಾಯತ ಧರ್ಮವನ್ನು ತುಳಿಯುತ್ತಿದ್ದಾರೆ ಎಂದು ಹೇಳಿಕೆ ನೀಡಿರುವುದಕ್ಕೆ ವಿನಯ ಕುಲಕರ್ಣಿ ಪ್ರತಿಕ್ರಿಯೆ ನೀಡಿದ್ದಾರೆ ವಿನಃ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಪಕ್ಷ ಜಾತ್ಯಾತೀತ ರಾಜಕೀಯ ಪಕ್ಷಗಳಾಗಿವೆ.
ಧರ್ಮ ಹೋರಾಟವೇ ಬೇರೆ, ರಾಜಕೀಯವೇ ಬೇರೆ ಒಂದಕ್ಕೊಂದು ಸಂಬಂಧವಿಲ್ಲ ಎಂದರು.