ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿ ಮಾಜಿ ಸಂಸದೆ ರಮ್ಯಾಗಿಲ್ಲ ಸ್ಥಾನ

ಭಾನುವಾರ, 31 ಮಾರ್ಚ್ 2019 (10:46 IST)
ಬೆಂಗಳೂರು : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಚುನಾವಣಾ ಪ್ರಚಾರಕ್ಕಾಗಿ ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ಮಾಜಿ ಸಂಸದೆ ಕಾಂಗ್ರೆಸ್​ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ರಮ್ಯಾ ಅವರಿಗೆ ಸ್ಥಾನವನ್ನು ನೀಡಲಾಗಿಲ್ಲ.


ಕಾಂಗ್ರೆಸ್ ನಿಂದ 40 ಮಂದಿ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್‌, ಲೋಕಸಭೆ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್‌, ಎಚ್‌.ಕೆ.ಪಾಟೀಲ್‌, ರಾಮಲಿಂಗಾರೆಡ್ಡಿ, ಡಾ. ಜಯಮಾಲಾ, ಉಮಾಶ್ರೀ, ಸಿ.ಎಂ.ಇಬ್ರಾಹಿಂ, ಗುಲಾಮ್‌ ನಬಿ ಆಜಾದ್‌, ಪೃಥ್ವಿರಾಜ್‌ ಚವಾಣ್‌, ಸಚಿನ್‌ ಪೈಲಟ್‌, ಸಲೀಮ್‌ ಅಹಮದ್‌, ಆರ್‌.ವಿ. ದೇಶಪಾಂಡೆ, ಎಂ.ಬಿ. ಪಾಟೀಲ್‌, ಕೆ.ಜೆ. ಜಾರ್ಜ್‌, ಸತೀಶ್‌ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಜಮೀರ್‌ ಅಹ್ಮದ್‌ ಖಾನ್‌, ಆರ್‌.ಬಿ.ತಿಮ್ಮಾಪುರ, ಪಿ.ಟಿ. ಪರಮೇಶ್ವರ ನಾಯ್ಕ್‌, ಕೆ. ರೆಹಮಾನ್‌ ಖಾನ್‌, ಕೆ.ಎಚ್‌. ಮುನಿಯಪ್ಪ, ಡಾ.ಶರಣಪ್ರಕಾಶ್‌ ಪಾಟೀಲ್‌, ಎಚ್‌.ಎಂ. ರೇವಣ್ಣ, ಮೋಟಮ್ಮ, ಮುಖ್ಯಮಂತ್ರಿ ಚಂದ್ರು, ರೋಷನ್‌ ಬೇಗ್‌, ಡಾ. ಎಚ್‌.ಸಿ. ಮಹದೇವಪ್ಪ, ಡಾ. ಎಲ್‌. ಹನುಮಂತಯ್ಯ, ವಿ.ಆರ್‌. ಸುದರ್ಶನ್‌ ಮತ್ತು ಐವಾನ್‌ ಡಿಸೋಜಾ ಅವರು ಸ್ಥಾನ ಪಡೆದುಕೊಂಡಿದ್ದಾರೆ.


ಆದರೆ ರಾಜ್ಯದಲ್ಲಿ ಪ್ರಚಾರ ನಡೆಸಲಿರುವ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಮಾಜಿ ಸಂಸದೆ, ಎಐಸಿಸಿ ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ರಮ್ಯಾ ಅವರಿಗೆ ಸ್ಥಾನ ನೀಡದೆ ಅವರನ್ನು ಕಡೆಗಣಿಸಲಾಗಿದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ