ಕಾಂಗ್ರೆಸ್ ವಿರುದ್ಧ ಜೆಡಿಎಸ್ ಅಪಪ್ರಚಾರ ಮಾಡ್ತಿದೆ ಎಂದ ಸಿಎಂ!
ಜೆಡಿಎಸ್ ಪಕ್ಷದಿಂದಲೇ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂಬುದು ತಮ್ಮ ಗಮನಕ್ಕೆ ಬಂದಿದೆ ಅಂತ ಸಿಎಂ ಹೇಳಿದ್ದಾರೆ.
ಮತದಾರರು ಯಾವುದೇ ಅಪಪ್ರಚಾರಗಳಿಗೆ ಕಿವಿಕೊಡದೇ ಕೋಲಾರದಲ್ಲಿ ಮೈತ್ರಿ ಅಭ್ಯರ್ಥಿ ವಿ.ಮುನಿಯಪ್ಪ ಅವರನ್ನು ಬೆಂಬಲಿಸಬೇಕು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮನವಿಮಾಡಿದರು.
ಮೋದಿ ಮತ್ತೆ ಪ್ರಧಾನಿಯಾಗಲು ಸಾಧ್ಯವಿಲ್ಲ. ರಾಹುಲ್ ಗಾಂಧಿ ನೇತೃತ್ವದಲ್ಲಿ ಕೇಂದ್ರದಲ್ಲಿ ಸರ್ಕಾರ ರಚನೆಯಾಗಲಿದೆ
ಎಂದು ಕುಮಾರಸ್ವಾಮಿ ಹೇಳಿದರು.