5 ಸಾವಿರ ಬೈಕ್ ರ್ಯಾಲಿ, ಕುಂದಾನಗರಿಯಲ್ಲಿ ಬಿಜೆಪಿ ಶಕ್ತಿ

ಭಾನುವಾರ, 21 ಏಪ್ರಿಲ್ 2019 (15:27 IST)
ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುತ್ತಿರುವಂತೆ ಪಕ್ಷಗಳು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.
ಬೆಳಗಾವಿ ದಕ್ಷಿಣ, ಉತ್ತರ ಮತಕ್ಷೇತ್ರದಲ್ಲಿ ಬಿಜೆಪಿ ಬೃಹತ್ ಬೈಕ್ ರ್ಯಾಲಿ ನಡೆಸಿತು.

ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಪರ ಮತಯಾಚನೆ ಮಾಡಲಾಯಿತು.

ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ, ಶಾಸಕ ಅರವಿಂದ ಲಿಂಬಾವಳಿ, ಶಾಸಕರಾದ ಅಭಯ್ ಪಾಟೀಲ್, ಅನಿಲ್ ಬೆನಕೆ ಭಾಗಿಯಾಗಿದ್ದರು. ಸುರೇಶ ಅಂಗಡಿ ಪರ ಕೇಸರಿ ನಾಯಕರಿಂದ ಮತಯಾಚನೆ ನಡೆಸಲಾಯಿತು.

5 ಸಾವಿರ ಬೈಕ್ ಸವಾರರು ರ್ಯಾಲಿಯಲ್ಲಿ ಭಾಗಿಯಾಗಿದ್ದರು. ಹರ ಹರ ಮೋದಿ ಘರ್ ಘರ್ ಮೋದಿ ಘೋಷಣೆ ಕೂಗಿದ ಕಾರ್ಯಕರ್ತರು. ಬಿಜೆಪಿ ಪರ ಘೋಷಣೆ ಮೊಳಗಿಸಿದ್ರು.ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ