ಪ್ರಧಾನಿ ಮೋದಿ ಹೆಸರಿನಲ್ಲಿ ಮತ ಕೇಳುತ್ತಿದ್ದಾರೆ ಎನ್ನುವ ಕಾಂಗ್ರೆಸ್‍ ನವರಿಗೆ ಸವಾಲ್ ಹಾಕಿದ ಬಿಎಸ್ ವೈ

ಶುಕ್ರವಾರ, 12 ಏಪ್ರಿಲ್ 2019 (09:36 IST)
ಹುಬ್ಬಳ್ಳಿ : ನಾವು ಪ್ರಧಾನಿ ಮೋದಿ ಹೆಸರಿನಲ್ಲಿ ಮತ ಕೇಳುತ್ತಿದ್ದೇವೆ ಎಂದು ವಾಗ್ದಾಳಿ ನಡೆಸುವ ಕಾಂಗ್ರೆಸ್‍ ನವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹೆಸರು ಹೇಳಿ ವೋಟ್ ಕೇಳಲಿ ನೋಡೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸವಾಲು ಹಾಕಿದ್ದಾರೆ.

ನಗರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, 104 ಕ್ಷೇತ್ರಗಳಲ್ಲಿ ಗೆದ್ದರೂ ನಾವು ವಿರೋಧ ಪಕ್ಷವಾಗಿ ಉಳಿದಿದ್ದೇವೆ. ಕೇವಲ 37 ಕ್ಷೇತ್ರಗಳಲ್ಲಿ ಗೆದ್ದ ಜೆಡಿಎಸ್‍ಗೆ ಮುಖ್ಯಮಂತ್ರಿ ಸ್ಥಾನ ಸಿಕ್ಕಿದೆ. ಇದು ಪ್ರಜಾತಂತ್ರ ವ್ಯವಸ್ಥೆಯಲ್ಲ ಎಂದು ಮೈತ್ರಿ ಸರ್ಕಾರದ ವಿರುದ್ಧ ಮತ್ತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕು ಎಂದು ಕಾಂಗ್ರೆಸ್‍ನ ಹಿರಿಯ ನಾಯಕ ಜನಾರ್ದನ ಪೂಜಾರಿ ಹೇಳಿದ್ದಾರೆ. ಹೀಗಾಗಿ ಎಲ್ಲ ಕಡೆ ನಮ್ಮ ಅಲೆ ಇದೆ. ಸ್ವಲ್ಪ ಆ ಕಡೆ ಈಕಡೆ ಎನ್ನುವವರ ಕೈ ಕಾಲು ಕಟ್ಟಿ ನಮ್ಮ ಸಾಧನೆ ಹೇಳಿ ಮತ ಹಾಕಿಸಿ ಎಂದು ಅವರು ಹೇಳಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ