ಸುಮಲತಾ ಅಂಬರೀಶ್ ಸಮಾವೇಶದಲ್ಲಿ ಕಾಂಗ್ರೆಸ್ ಕಾರ್ಯಕರ್ತರು

ಗುರುವಾರ, 4 ಏಪ್ರಿಲ್ 2019 (11:13 IST)
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಸುಮಲತಾ ಅಂಬರೀಶ್ ಸಮಾವೇಶದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದಾರೆ.


ಕಾಂಗ್ರೆಸ್ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಬೆಂಬಲ ಸೂಚಿಸುತ್ತಿದ್ದರೂ, ಅಂಬರೀಶ್ ಅಭಿಮಾನಿಗಳಾಗಿರುವ ಕೆಲವು ಕಾಂಗ್ರೆಸ್ ಕಾರ್ಯಕರ್ತರು ಸುಮಲತಾ ಪರವಾಗಿ ಕೆಲಸ ಮಾಡುತ್ತಿದ್ದಾರೆ.

ನಮ್ಮ ಮೇಲೆ ಯಾರೂ ಒತ್ತಡ ಹಾಕಿಲ್ಲ. ನಮ್ಮ ಸ್ವ ಇಚ್ಛೆಯಿಂದ, ರೆಬಲ್ ಸ್ಟಾರ್ ಅಂಬರೀಶ್ ಮೇಲಿನ ಅಭಿಮಾನದಿಂದ ಬಂದಿದ್ದೇವೆ. ನಮಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್, ರಾಕಿಂಗ್ ಸ್ಟಾರ್ ಯಶ್ ಎಂದರೆ ನಮಗೆ ಇಷ್ಟ. ಅದಕ್ಕೆ ನಾವು ಸುಮಲತಾ ಪರ ಪ್ರಚಾರ ಮಾಡುತ್ತಿದ್ದೇವೆ ಎಂದು ಕಾರ್ಯಕರ್ತರು ಮಾಧ್ಯಮಗಳಿಗೆ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ