ಡಿ.ಕೆ.ಶಿ. ವಿರುದ್ಧ ಹೈಕಮಾಂಡಿಗೆ ದೂರು ನೀಡುತ್ತೇನೆ ಎಂದು ಎಂ.ಬಿ.ಪಾಟೀಲ್ ಹೇಳಿದ್ಯಾಕೆ?

ಶನಿವಾರ, 13 ಏಪ್ರಿಲ್ 2019 (10:05 IST)
ವಿಜಯಪುರ : ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದ ವಿಚಾರವಾಗಿ ಕ್ಷಮೆ ಕೇಳಿದ ಬೃಹತ್ ನೀರಾವರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಗೃಹ ಸಚಿವ ಎಂ.ಬಿ.ಪಾಟೀಲ್ ಕಿಡಿಕಾರಿದ್ದಾರೆ.


ಈ ಕುರಿತು ಮಾತನಾಡಿದ ಅವರು, ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟದ ಬಗ್ಗೆ ಮಾತನಾಡಲು ಡಿ.ಕೆ.ಶಿವಕುಮಾರ್ ಅವರಿಗೆ ಏನು ಅಧಿಕಾರವಿದೆ? ಕ್ಷಮೆ ಕೇಳಲು ಅವರು ಯಾರು? ಅವರಿಗೂ ಲಿಂಗಾಯತ ಧರ್ಮಕ್ಕೂ ಏನು ಸಂಬಂಧ? ಅವರೇನು ಕೆಪಿಸಿಸಿ ಅಧ್ಯಕ್ಷರೇ? ಡಿ.ಕೆ.ಶಿವಕುಮಾರ್ ಮೊದಲು ತಮ್ಮ ಸಮುದಾಯದಲ್ಲಿರುವ ಭಿನ್ನಾಭಿಪ್ರಾಯ ಬಗೆಹರಿಸಿಕೊಳ್ಳಲಿ ಎಂದು ಗರಂ ಆಗಿ ಹೇಳಿದ್ದಾರೆ.


ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟವನ್ನು ನಾನು ಚುನಾವಣೆಯಲ್ಲಿ ಬಳಸಿಕೊಂಡಿಲ್ಲ. 2018ರ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿಯೂ ಈ ಬಗ್ಗೆ ಹೇಳಿರಲಿಲ್ಲ. ಆದರೆ ಡಿ.ಕೆ.ಶಿವಕುಮಾರ್ ಅವರು ಯಾಕೆ ಈ ಬಗ್ಗೆ ಪದೇ ಪದೇ ಪ್ರಸ್ತಾಪ ಮಾಡುತ್ತಿದ್ದಾರೆ? ಈ ವಿಚಾರವಾಗಿ ಈಗ ಮಾತನಾಡಿ ಪಕ್ಷಕ್ಕೆ ಮುಜುಗುರ ಉಂಟು ಮಾಡುವುದಿಲ್ಲ. ಲೋಕಸಭಾ ಚುನಾವಣೆಯ ಬಳಿಕ ಸುದ್ದಿಗೋಷ್ಠಿ ಕರೆದು ಸರಿಯಾದ ಉತ್ತರ ನೀಡುತ್ತೇನೆ. ಹಾಗೇ ಡಿ.ಕೆ.ಶಿವಕುಮಾರ್ ವಿರುದ್ಧ ಪಕ್ಷದ ನಾಯಕರಿಗೆ, ಹೈಕಮಾಂಡಿಗೆ ದೂರು ನೀಡುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ