ಪ್ರಧಾನಿ ಮೋದಿ ಹೆಲಿಕಾಪ್ಟರ್ ತಪಾಸಣೆ ಮಾಡಿದ ಚುನಾವಣಾಧಿಕಾರಿಯನ್ನು ಅಮಾನತು ಮಾಡಿದ್ಯಾಕೆ ಗೊತ್ತಾ?
ಗುರುವಾರ, 18 ಏಪ್ರಿಲ್ 2019 (08:52 IST)
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಿದ ಚುನಾವಣಾಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಒಡಿಶಾದ ಸಂಬಲ್ಪುರದ ಚುನಾವಣಾ ವೀಕ್ಷಕರಾಗಿ ನೇಮಕಗೊಂಡಿದ್ದ ಕರ್ನಾಟಕದ ಕೇಡರ್ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹಿನ್ಸ್ ಅಮಾನತುಗೊಂಡ ಚುನಾವಣಾಧಿಕಾರಿಯಾಗಿದ್ದು, ಇವರು ಮಂಗಳವಾರ ಸಂಭಲ್ ಪುರಕ್ಕೆ ನರೇಂದ್ರ ಮೋದಿ ಭೇಟಿ ನೀಡಿದ್ದ ವೇಳೆ ಹೆಲಿಕಾಪ್ಟರ್ ಪರಿಶೀಲನೆ ಮಾಡಿದ್ದರು.
ಎಸ್ ಪಿಜಿಯಿಂದ ವಿಶೇಷ ರಕ್ಷಣೆ ಪಡೆದಿರುವ ವಾಹನಗಳನ್ನು ಕಾನೂನಿನಡಿಯಲ್ಲಿ ಪರಿಶೀಲನೆ ಮಾಡುವಂತಿಲ್ಲ. ಹೀಗಾಗಿ ಜಿಲ್ಲಾಧಿಕಾರಿ ಹಾಗೂ ಡಿಐಜಿ ಆಯೋಗಕ್ಕೆ ವರದಿ ಸಲ್ಲಿಸಿದ್ದರು. ವರದಿಯನ್ನು ಪರಿಗಣಿಸಿದ ಆಯೋಗ ನಿಯಮ ಉಲ್ಲಂಘಿಸಿದ್ದಕ್ಕೆ ಮೊಹ್ಮಮದ್ ಮೊಹಿನ್ಸ್ ರನ್ನು ಅಮಾನತ್ತುಗೊಳಿಸಿ ಮುಂದಿನ ಸೂಚನೆಯವರೆಗೂ ಜಿಲ್ಲಾ ಕೇಂದ್ರದಲ್ಲಿರುವಂತೆ ಭಾರತೀಯ ಚುನಾವಣಾ ಆಯೋಗ ಕಾರ್ಯದರ್ಶಿ ರಾಕೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.