ಇವಿಎಂ ಸರಿಯಿಲ್ಲ ಎಂದವರಿಗೆ ತೇಜಸ್ವಿ ಸೂರ್ಯ ಹಾಕಿದ ಸವಾಲೇನು ಗೊತ್ತಾ?

ಮಂಗಳವಾರ, 21 ಮೇ 2019 (10:24 IST)
ಬೆಂಗಳೂರು : ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿ ಬಾರಿ ಮತ ಬಂದ ಹಿನ್ನಲೆಯಲ್ಲಿ ಕೆಲ ಪಕ್ಷಗಳು ಆತಂಕಕ್ಕೆ ಒಳಗಾಗಿವೆ. ಅಲ್ಲದೆ ಇವಿಎಂನಲ್ಲಿ ದೋಷವಿದೆ ಎಂದು ಹೇಳಿದ್ದವು.




ಇವಿಎಂಗಳ ವಿಶ್ವಾಸಾರ್ಹತೆ ಪ್ರಶ್ನಿಸುವ ಜನ ಪ್ರತಿನಿಧಿಗಳಿಗೆ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಟ್ವೀಟರ್ ನಲ್ಲಿ ಬಹಿರಂಗವಾಗಿ  ಸವಾಲೆಸೆದಿದ್ದಾರೆ.


ಈ ಕುರಿತಂತೆ ಟ್ವೀಟ್ ಮಾಡಿರುವ ತೇಜಸ್ವಿ ಸೂರ್ಯ, ಇವಿಎಂಗಳ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವ ಜನಪ್ರತಿನಿಧಿಗಳು ಅದೇ ಇವಿಎಂಗಳ ಮೂಲಕವೇ ಗೆದ್ದು ಬಂದವರಿದ್ದಾರೆ. ಹೀಗಾಗಿ ಅವರು ಇವಿಎಂ ಸರಿಯಿಲ್ಲ ಎಂದು ಹೇಳಿ ತಮ್ಮ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆಯೇ ಎಂದು ಪ್ರಶ್ನಿಸುವ ಮೂಲಕ ಚಾಲೆಂಜ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ