ಪ್ರಧಾನಿ ಮೋದಿ, ರಾಹುಲ್ ಗಾಂಧಿ ಹಣೆಬರಹ ಇಂದು ನಿರ್ಧರಿಸಲಿರುವ ಚುನಾವಣಾ ಆಯೋಗ

ಮಂಗಳವಾರ, 30 ಏಪ್ರಿಲ್ 2019 (08:58 IST)
ನವದೆಹಲಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಮತ್ತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ದಾಖಲಾದ ಪ್ರಕರಣಗಳ ತೀರ್ಪನ್ನು ಇಂದು ಚುನಾವಣಾ ಆಯೋಗ ನೀಡಲಿದೆ.


ರಾಹುಲ್ ಗಾಂಧಿ, ಪ್ರಧಾನಿ ಮೋದಿ ಅಲ್ಲದೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ಧ ದಾಖಲಾದ ದೂರುಗಳಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಇಂದು ನಿರ್ಧಾರ ಮಾಡಲಿದೆ.

‘ಚೌಕೀದಾರ್ ಚೋರ್ ಹೈ’ ಎಂಬ ಸ್ಲೋಗನ್ ಬಳಸಿದ್ದಕ್ಕೆ ರಾಹುಲ್ ಗಾಂಧಿ ವಿರುದ್ಧ, ಚುನಾವಣಾ ರ್ಯಾಲಿಯಲ್ಲಿ ಸೈನಿಕರ ಹೆಸರು ಬಳಸಿದ್ದಕ್ಕೆ ಪ್ರಧಾನಿ ಮೋದಿ ವಿರುದ್ಧ ಮತ್ತು ಅಮಿತ್ ಶಾ ವಿರುದ್ಧ ಪ್ರಚೋದನಾಕಾರಿ ಭಾಷಣ ಮಾಡಿದ್ದಕ್ಕೆ ದೂರು ದಾಖಲಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ