ತಮಿಳುನಾಡಿನಲ್ಲಿ ವೆಲ್ಲೂರು ಸೇರಿದಂತೆ 38 ಲೋಕಸಭಾ ಕ್ಷೇತ್ರ ಚುನಾವಣೆ ಏಪ್ರಿಲ್ 18ರಂದು ನಿಗದಿಯಾಗಿತ್ತು. ಆದರೆ ಡಿಎಂಕೆ ನಾಯಕ ದೊರೈ ಮುರುಗನ್ ಮನೆಯ ಮೇಲೆ ಆದಾಯ ತೆರಿಗೆ (ಐಟಿ) ಇಲಾಖೆಯು ಏಪ್ರಿಲ್ 10ರಂದು ದಾಳಿ ಮಾಡಿತ್ತು. ಈ ವೇಳೆ ಅವರ ಗೋದಾಮಿನಲ್ಲಿ ಬರೋಬ್ಬರಿ 11.53 ಕೋಟಿ ರೂ. ಹಣ ಪತ್ತೆಯಾಗಿತ್ತು. ಭಾರೀ ಪ್ರಮಾಣದಲ್ಲಿ ಹಣ ಪತ್ತೆಯಾಗಿದ್ದರಿಂದ ಹಣದಿಂದ ಮತದಾರರನ್ನು ಓಲೈಸುವ ಪ್ರಯತ್ನ ನಡೆಸಲಾಗಿದೆ ಎನ್ನುವ ಶಂಕಿಸಿ ಚುನಾವಣಾ ಆಯೋಗವು ವೆಲ್ಲೂರು ಲೋಕಸಭಾ ಕ್ಷೇತ್ರದ ಚುನಾವಣೆ ರದ್ದು ಮಾಡಲು ಅನುಮತಿ ಕೋರಿ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿತ್ತು.
ಈ ಹಿನ್ನಲೆಯಲ್ಲಿ ಇದೇ ಮೊದಲ ಬಾರಿಗೆ ಹಣ ದುರ್ಬಳಕೆ ಆರೋಪದಿಂದ ವೆಲ್ಲೂರು ಲೋಕಸಭಾ ಕ್ಷೇತ್ರದ ಚುನಾವಣೆ ರದ್ದುಗೊಳಿಸಲು ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಒಪ್ಪಿಗೆ ನೀಡಿದ್ದಾರೆ. ಆದ್ದರಿಂದ ವೆಲ್ಲೂರು ಲೋಕಸಭಾ ಕ್ಷೇತ್ರದ ಚುನಾವಣೆ ರದ್ದುಗೊಳಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.