ಈ ವಿಡಿಯೊ ಎರಡು ವರ್ಷ ಹಳೆಯದಾಗಿದೆ. ಆದರೆ ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಣಕ್ಕಿಳಿದ ಮಾಜಿ ಯೋಧ ತೇಜ್ ಬಹದ್ದೂರ್ ಯಾದವ್ ಅವರು ಸೇನೆಯಿಂದ ವಜಾಗೊಂಡ ಬಗ್ಗೆ ಗೊಂದಲ ಮಾಹಿತಿ ನೀಡಿದ್ದರಿಂದ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿತ್ತು.
ಈ ವೇಳೆ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಪ್ರತಿಕಾಗೋಷ್ಠಿ ನಡೆಸಿದ ಬಿಜೆಪಿ ವಕ್ತಾರ ನರಸಿಂಹ ರಾವ್ ಅವರು, ‘ಈ ವಿಡಿಯೋವನ್ನು ತನಿಖಾ ಸಂಸ್ಥೆಗಳು ಗಂಭೀರವಾಗಿ ಪರಿಗಣಿಸಬೇಕು. ಆತನಿಗೆ ಎಸ್ ಪಿಯಿಂದ ಟಿಕೆಟ್ ನೀಡಲಾಗಿದ್ದ ವಿಚಾರ ನಮಗೆ ಅಚ್ಚರಿ ಮತ್ತು ಆತಂಕ ಮೂಡಿಸಿತ್ತು ' ಎಂದಿದ್ದಾರೆ.
ಆದರೆ ವಿಡಿಯೋ ಎರಡು ವರ್ಷದ ಹಳೆಯದ್ದಾಗಿದ್ದು, ವಿಡಿಯೋದಲ್ಲಿರುವುದು ನಾನೇ ಎಂದು ತೇಜ್ ಬಹುದ್ದೂರ್ ಒಪ್ಪಿಕೊಂಡಿದ್ದಾರೆ. ಅಲ್ಲದೆ ಈ ವಿಡಿಯೋ ರಿಲೀಸ್ ಹಿಂದೆ ಯಾರದ್ದೋ ಪಿತೂರಿ ಇದೆ ಎಂದು ಆರೋಪಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.