ಲೋಕಸಭೆ ಚುನಾವಣೆ 2019: ಬಿಜೆಪಿ ಟಿಕೆಟ್ ಪಡೆದ ಸೆಲೆಬ್ರಿಟಿಗಳು
ಬುಧವಾರ, 24 ಏಪ್ರಿಲ್ 2019 (07:23 IST)
ನವದೆಹಲಿ: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಹಿಂದಿನಂತೇ ಕೆಲವು ಸೆಲೆಬ್ರಿಟಿಗಳು ಕಾಂಗ್ರೆಸ್, ಬಿಜೆಪಿ ಸೇರಿದಂತೆ ಹಲವು ಪಕ್ಷಗಳಿಂದ ಚುನಾವಣೆ ಕಣಕ್ಕಿಳಿದಿದ್ದಾರೆ.
ಈ ಪೈಕಿ ಬಿಜೆಪಿ ಕ್ರಿಕೆಟಿಗ ಗೌತಮ್ ಗಂಭೀರ್ ಬಳಿಕ ಇದೀಗ ಬಾಲಿವುಡ್ ತಾರೆ ಸನ್ನಿ ಡಿಯೋಲ್ ಗೆ ಟಿಕೆಟ್ ಘೋಷಿಸಿದೆ. ಗೌತಮ್ ಗಂಭೀರ್ ದೆಹಲಿಯಲ್ಲಿ ಟಿಕೆಟ್ ಗಿಟ್ಟಿಸಿಕೊಂಡರೆ, ಸನ್ನಿ ಪಂಜಾಬ್ ನ ಗುರುದಾಸ್ ಪುರದಿಂದ ಟಿಕೆಟ್ ಪಡೆದಿದ್ದಾರೆ.
ಅಲ್ಲದೆ, ನಟ ಅನುಪಮ್ ಖೇರ್ ಪತ್ನಿ, ಕಿರಣ್ ಖೇರ್ ಗೆ ಚಂಡೀಘಡದಿಂದ ಟಿಕೆಟ್ ನೀಡಲಾಗಿದೆ. ನಟಿ ಜಯಪ್ರದಾ ಉತ್ತರ ಪ್ರದೇಶದ ರಾಂಪುರದಿಂದ ಸ್ಪರ್ಧಿಸುತ್ತಿದ್ದಾರೆ. ಮಲಯಾಳಂ ನಟ ಸುರೇಶ್ ಗೋಪಿ ಎನ್ ಡಿಎ ಅಭ್ಯರ್ಥಿಯಾಗಿ ತ್ರಿಶ್ಶೂರ್ ನಿಂದ ಕಣಕ್ಕಿಳಿದಿದ್ದಾರೆ. ಇವರಲ್ಲದೆ ಈಗಾಗಲೇ ಬಿಜೆಪಿಯಿಂದ ಸ್ಪರ್ಧಿಸಿ ಸಂಸದರಾದ ಹೇಮ ಮಾಲಿನಿ, ರಾಜ್ಯವರ್ಧನ್ ಸಿಂಗ್ ರಾಥೋಡ್ ಮುಂತಾದವರು ಮತ್ತೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ