ಲೋಕಸಭೆ ಮಹಾಹಬ್ಬ ಇಂದಿನಿಂದ ಶುರು: 20 ರಾಜ್ಯಗಳಲ್ಲಿ ಇಂದು ಚುನಾವಣೆ
ಗುರುವಾರ, 11 ಏಪ್ರಿಲ್ 2019 (09:45 IST)
ನವದೆಹಲಿ: ಲೋಕಸಭೆ ಚುನಾವಣೆ 2019 ರ ಮೊದಲ ಹಂತದ ಮತದಾನ ಇಂದು ಆರಂಭವಾಗಿದ್ದು, 20 ರಾಜ್ಯಗಳ 91 ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆಯುತ್ತಿದೆ.
ಆಂಧ್ರಪ್ರದೇಶ, ಸಿಕ್ಕಿಂ, ಒಡಿಶಾ ಮತ್ತು ಅರುಣಾಚಲ ಪ್ರದೇಶಗಳಲ್ಲಿ ವಿಧಾನಸಭೆಗೂ ಚುನಾವಣೆ ನಡೆಯುತ್ತಿದೆ. ಆಂಧ್ರ, ತೆಲಂಗಾಣ, ಉತ್ತರಾಖಂಡ, ಜಮ್ಮು ಕಾಶ್ಮೀರ, ಮೇಘಾಲಯ, ಮಣಿಪುರ, ತ್ರಿಪುರಾ, ಅಂಡಮಾನ್ ಮತ್ತು ನಿಕೋಬಾರ್ ಗಳಲ್ಲೂ ಇಂದು ಲೋಕಸಭೆ ಚುನಾವಣೆ ನಡೆಯುತ್ತಿದೆ.
ಶಾಂತಿಯುತ ಚುನಾವಣೆಗೆ ಚುನಾವಣಾ ಆಯೋಗ ಎಲ್ಲಾ ಕ್ರಮ ಕೈಗೊಂಡಿದೆ. ಏಪ್ರಿಲ್ 18 ಮತ್ತು 23 ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ.