ಲೋಕಸಭೆ ಮಹಾಸಮರ: ಬೆಳ್ಳಂ ಬೆಳಿಗ್ಗೆಯೇ ಓಟ್ ಮಾಡಿದ ವಿಐಪಿಗಳು

ಗುರುವಾರ, 18 ಏಪ್ರಿಲ್ 2019 (07:29 IST)
ಬೆಂಗಳೂರು: ಲೋಕಸಭೆ ಚುನಾವಣೆ 2019 ರ ಎರಡನೇ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಕರ್ನಾಟಕ, ತಮಿಳುನಾಡಿನ ಕೆಲವು ಭಾಗಗಳಲ್ಲಿ ಇಂದು ಚುನಾವಣೆ ನಡೆಯುತ್ತಿದೆ.

 
ಕೇಂದ್ರದ ಮಾಜಿ ಸಚಿವ ಪಿ ಚಿದಂಬರಂ, ಸುಶಿಲ್ ಕುಮಾರ್ ಶಿಂಧೆ ತಮಿಳುನಾಡು, ಮಹಾರಾಷ್ಟ್ರದ ತಮ್ಮ ಮತಗಟ್ಟೆಗಳಲ್ಲಿ ಮತ ಚಲಾಯಿಸಿದ್ದಾರೆ.

ಇನ್ನು, ಕರ್ನಾಟಕದ ನಾಯಕರ ಪೈಕಿ ಬೆಂಗಳೂರು ಉತ್ತರ ಅಭ್ಯರ್ಥಿ ಡಿವಿ ಸದಾನಂದ ಗೌಡ, ದಕ್ಷಿಣ ಅಭ್ಯರ್ಥಿ ತೇಜಸ್ವಿ ಸೂರ್ಯ, ನಿರ್ಮಲಾ ಸೀತಾರಾಂ, ಶಾಸಕ ರವಿಸುಬ್ರಹ್ಮಣ್ಯ ಮುಂತಾದ ನಾಯಕರು ತಮ್ಮ ತಮ್ಮ ಮತಗಟ್ಟೆಗೆ ಬೆಳಿಗ್ಗೆಯೇ ಆಗಮಿಸಿ ಹಕ್ಕು ಚಲಾಯಿಸಿದ್ದಾರೆ.

ಬೆಳಗ್ಗೆಯೇ ಜನರು ಮತಗಟ್ಟೆಗಳ ಮುಂದೆ ಸಾಲುಗಟ್ಟಿ ನಿಂತಿರುವ ದೃಶ್ಯ ಸಾಮಾನ್ಯವಾಗಿದೆ. ಯಾವುದೇ ಅಹಿತಕರ ಘಟನೆ, ಅಕ್ರಮಗಳು ನಡೆಯದಂತೆ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ