ಮೇ 26 ಕ್ಕೆ ಪ್ರಧಾನಿಯಾಗಿ ಎರಡನೇ ಬಾರಿಗೆ ಮೋದಿ ಪ್ರಮಾಣವಚನ ಸ್ವೀಕಾರ

ಗುರುವಾರ, 23 ಮೇ 2019 (14:22 IST)
ನವದೆಹಲಿ : ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಭರದಿಂದ ಸಾಗುತ್ತಿದ್ದು, ಇದೀಗ ಬಿಜೆಪಿ ಬಾರೀ ಮುನ್ನಡೆ ಸಾಧಿಸಿದೆ.




ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು, ಮಾತ್ರವಲ್ಲದೇ ಎನ್.ಡಿ.ಎ. 355 ಕ್ಷೇತ್ರಗಳಲ್ಲಿ ಗೆಲುವು/ಮುನ್ನಡೆ ಸಾಧಿಸಿದೆ.


ಈ ಹಿನ್ನಲೆಯಲ್ಲಿ ಮೇ 26 ರಂದು ಸಂಜೆ 6 ಗಂಟೆಗೆ ಪ್ರಧಾನಿಯಾಗಿ ಎರಡನೇ ಬಾರಿಗೆ ಮೋದಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಳೆದ ಬಾರಿಯೂ ಅವರು ಮೇ 26 ರಂದು ಸಂಜೆ 6 ಗಂಟೆಗೆ ಪ್ರಧಾನಿಯಾಗಿ ಮೊದಲಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ