ಒಡಿಶಾದಲ್ಲಿ ಚುನಾವಣಾ ಅಧಿಕಾರಿಯನ್ನು ಗುಂಡಿಟ್ಟು ಹತ್ಯೆ ಮಾಡಿದ ನಕ್ಸಲರು
ಗುರುವಾರ, 18 ಏಪ್ರಿಲ್ 2019 (11:40 IST)
ಒಡಿಶಾ : ದೇಶದ ಹಲವೆಡೆ ಇಂದು ಲೋಕಸಭಾ ಚುನಾವಣೆಯ 2ನೇ ಹಂತದ ಮತದಾನ ನಡೆಯುತ್ತಿದ್ದು, ಈ ನಡುವೆ ಒಡಿಶಾದಲ್ಲಿ ನಕ್ಸಲರು ಮಹಿಳಾ ಚುನಾವಣಾ ಅಧಿಕಾರಿಯನ್ನು ಗುಂಡಿಟ್ಟು ಹತ್ಯೆ ಮಾಡುವುದರ ಮೂಲಕ ತಮ್ಮ ಅಟ್ಟಹಾಸ ಮೆರೆದಿದ್ದಾರೆ.
ಒಡಿಶಾದ ಕಂದಮಾಲ್ ಜಿಲ್ಲೆಯ ಗೋಚಪಡಾದಲ್ಲಿ ನಡೆದಿದ್ದು, ಸಂಜುಕ್ತಾ ಕಂದಮಾಲ್ ಹತ್ಯೆಗೀಡಾದ ಚುನಾವಣಾ ಅಧಿಕಾರಿ ಎಂದು ತಿಳಿದುಬಂದಿದೆ. ಬೆಳಗಿನ ಜಾವ ಅಧಿಕಾರಿ ಮನೆಯಿಂದ ಚುನಾವಣಾ ಮತಗಟ್ಟೆಗೆ ತೆರಳುತ್ತಿದ್ದ ವೇಳೆ ಅವರ ವಾಹನವನ್ನು ಅಡ್ಡಗಟ್ಟಿದ ಬಂದೂಕುದಾರಿ ನಕ್ಸಲರು ವಾಹನಕ್ಕೆ ಬೆಂಕಿ ಹಚ್ಚಿ ಅಧಿಕಾರಿಯನ್ನು ಗುಂಡಿಟ್ಟು ಹತ್ಯೆಮಾಡಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
ಚುನಾವಣೆಯನ್ನು ಬಹಿಷ್ಕರಿಸಿದ್ದ ನಕ್ಸಲರು, ಕರಪತ್ರ ಬ್ಯಾನರ್ ಗಳನ್ನು ಅಂಟಿಸಿ ಚುನಾವಣೆಯನ್ನು ವಿರೋಧಿಸಿದ್ದರು. ಆದರೆ ಈ ನಡುವೆ ಚುನಾವಣೆ ನಡೆಸುತ್ತಿರುವ ಹಿನ್ನಲೆಯಲ್ಲಿ ನಕ್ಸಲರು ಈ ದುಷ್ಕರ್ತ್ಯ ಎಸಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.