ಮಂಡ್ಯ: ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಸ್ಪರ್ಧೆಗಿಳಿದಿರುವ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಕ್ರಮಬದ್ಧವಾಗಿಲ್ಲ ಎಂಬ ಆರೋಪಗಳ ಬಗ್ಗೆ ಮೈಸೂರು ಪ್ರಾದೇಶಿಕ ಆಯುಕ್ತರಿಂದ ವಿಚಾರಣೆ ಆರಂಭವಾಗಿದೆ.
ನಿಖಿಲ್ ನಾಮಪತ್ರದಲ್ಲಿ ಅನೇಕ ಲೋಪದೋಷವಿದೆ. ಹಾಗಿದ್ದರೂ ಜಿಲ್ಲಾ ಚುನಾವಣಾಧಿಕಾರಿ ಎನ್. ಮಂಜುಶ್ರೀ ಸಿಎಂ ಕೈಗೊಂಬೆಯಂತೆ ಕೆಲಸ ಮಾಡಿದ್ದು, ನಾಮಪತ್ರ ಸಿಂಧು ಮಾಡಿದ್ದಾರೆ. ಅಷ್ಟೇ ಅಲ್ಲದೆ, ನಿಖಿಲ್ ಗೆ ನಾಮಪತ್ರ ಸಲ್ಲಿಸುವ ಮೊದಲೇ ಕ್ರಮ ಸಂಖ್ಯೆ 1 ನೀಡಿರುವುದರ ಹಿಂದೆಯೂ ಸಿಎಂ ಕೈವಾಡವಿದೆ ಎಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ದೂರಿದ್ದರು.
ಈ ಎಲ್ಲಾ ಆರೋಪಗಳ ಹಿನ್ನಲೆಯಲ್ಲಿ ಮೈಸೂರು ಪ್ರಾದೇಶಿಕ ಆಯುಕ್ತರು ವಿಚಾರಣೆ ನಡೆಸಿ ಕೇಂದ್ರ ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಲಿದ್ದಾರೆ. ವರದಿಯಲ್ಲಿ ಲೋಪವಿದ್ದಿದ್ದು ನಿಜ ಎಂದು ಗೊತ್ತಾದಲ್ಲಿ ತಕ್ಕ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಎಂ. ಸಂಜೀವ್ ಕುಮಾರ್ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ