ಚಿತ್ರದುರ್ಗದ ರ್ಯಾಲಿಯ ವೇಳೆ ಪ್ರಧಾನಿ ಮೋದಿ ತಂದ ಟ್ರಂಕ್ ರಹಸ್ಯ ಬಯಲು

ಸೋಮವಾರ, 15 ಏಪ್ರಿಲ್ 2019 (09:46 IST)
ಚಿತ್ರದುರ್ಗ : ರ್ಯಾಲಿ ವೇಳೆ ಪ್ರಧಾನಿ ಮೋದಿ ಹೆಲಿಕಾಪ್ಟರ್ ನಿಂದ ಇನ್ನೋವಾ ಕಾರಿಗೆ ತುಂಬಿಸಿದ ಟ್ರಂಕ್ ನಲ್ಲಿ ಏನಿದೆ ಎಂಬ ರಹಸ್ಯ ಇದೀಗ ಬಯಲಾಗಿದೆ.


ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದು, ಅವರಿದ್ದ ಹೆಲಿಕಾಪ್ಟರ್ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬಂದಿಳಿದ ವೇಳೆ ಅದರಲ್ಲಿದ್ದ ಟ್ರಂಕ್ ಒಂದನ್ನು ಮೂರ್ನಾಲ್ಕು ಮಂದಿ ಹೊತ್ತುಕೊಂಡು ಹೋಗಿ ಅಲ್ಲಿಯೇ ನಿಲ್ಲಿಸಿದ್ದ ಇನ್ನೋವಾ ಒಂದರಲ್ಲಿ ಇಟ್ಟಿದ್ದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯಲ್ಲಿ ಬಳಸಲು ಈ ಟ್ರಂಕ್ ನಲ್ಲಿ ಅಪಾರ ಹಣವನ್ನು ತರಲಾಗಿದೆ ಎಂದು ಆರೋಪಿಸಿ  ಕಾಂಗ್ರೆಸ್ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿತ್ತು.


ಆದರೆ ಇದೀಗ ಆ ಟ್ರಂಕ್ ನಲ್ಲಿ ಭದ್ರತೆಗೆ ಸಂಬಂಧಿಸಿದ ಸಲಕರಣೆಗಳು ಇದ್ದವು. ಆ ಕಾರು ಕೂಡ ಬೆಂಗಾವಲು ಪಡೆಯ ವಾಹನವಾಗಿತ್ತು. ಈ ಕುರಿತು ಮತ್ತಷ್ಟು ಮಾಹಿತಿಗಳನ್ನು ಕಲೆ ಹಾಕುತ್ತಿರುವುದಾಗಿ ಚಿತ್ರದುರ್ಗ ಜಿಲ್ಲಾ ರಕ್ಷಣಾಧಿಕಾರಿ ಡಾ. ಕೆ. ಅರುಣ್ ಟ್ರಂಕ್ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ