ರಾಮನಾಥ್ ಕೋವಿಂದ್ ರಾಷ್ಟ್ರಪತಿಯಾಗಲು ಜಾತಿಯೇ ಕಾರಣ- ಸಿಎಂ ಅಶೋಕ್ ಗೆಹ್ಲೋಟ್ ನಿಂದ ವಿವಾದಾತ್ಮಕ ಹೇಳಿಕೆ

ಗುರುವಾರ, 18 ಏಪ್ರಿಲ್ 2019 (07:42 IST)
ನವದೆಹಲಿ : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಬಗ್ಗೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ಗುಜರಾತ್ ನಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಬಗ್ಗೆ ನರೇಂದ್ರ ಮೋದಿಗೆ ಭರವಸೆಯಿರಲಿಲ್ಲ. ಹೀಗಾಗಿ ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ರಾಷ್ಟ್ರಪತಿ ಮಾಡುವ ಬಗ್ಗೆ ಮೋದಿಗೆ ಅಮಿತ್ ಶಾ ಸೂಚನೆ ನೀಡಿರಬಹುದು. ಹಾಗಾಗಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರಪತಿಯಾಗಲು ಅವರ ಜಾತಿಯೇ ಕಾರಣವಾಗಿದೆ ಎಂದು ಹೇಳಿದ್ದಾರೆ.


ಸಿಎಂ ಅಶೋಕ್ ಗೆಹ್ಲೋಟ್ ಈ ಹೇಳಿಕೆಗೆ ಬಾರೀ ವಿರೋಧ ವ್ಯಕ್ತವಾಗಿದ್ದು, ಗೆಹ್ಲೊಟ್ ಹೇಳಿಕೆಯಿಂದ ದಲಿತ ಹಾಗೂ ಹಿಂದುಳಿದ ಸಮುದಾಯಕ್ಕೆ ಅವಮಾನ ಮಾಡಲಾಗಿದೆ. ಕೂಡಲೇ ಸಿಎಂ ಅಶೋಕ್ ಗೆಹ್ಲೋಟ್ ರಾಷ್ಟ್ರಪತಿಗಳ ಕ್ಷಮೆ ಕೋರಬೇಕು ಎಂದು ಬಿಜೆಪಿ ಆಗ್ರಹಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ