ಧರ್ಮಸ್ಥಳ ಮಂಜುನಾಥನ ಮೊರೆ ಹೋದ ಸುಮಲತಾ ಅಂಬರೀಶ್

ಮಂಗಳವಾರ, 2 ಏಪ್ರಿಲ್ 2019 (07:00 IST)
ಧರ್ಮಸ್ಥಳ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಸುಮಲತಾ ಅಂಬರೀಶ್ ನಿನ್ನೆ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದರು.


ನಿನ್ನೆ ಬೆಳಿಗ್ಗೆ 10.30 ರ ವೇಳೆಗೆ ಧರ್ಮಸ್ಥಳಕ್ಕೆ ಆಗಮಿಸಿದ ಸುಮಲತಾ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಸುಮಲತಾ ಅಂಬರೀಶ್ ಜತೆಗೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಟ ದೊಡ್ಡಣ್ಣ ಮುಂತಾದವರಿದ್ದರು.

ಇನ್ನು, ನಿನ್ನೆ ಮಂಡ್ಯದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸುಮಲತಾ ಪರ ಬಿರುಸಿನ ಪ್ರಚಾರ ನಡೆಸಿದರು. ಇಂದು, ರಾಕಿಂಗ್ ಸ್ಟಾರ್ ಯಶ್ ವಿವಿದೆಡೆ ರೋಡ್ ಶೋ ನಡೆಸಿ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ