ಕೈ ಪಾಳೆಯದ ಪ್ರಚಾರ ಬಲು ಜೋರು

ಶನಿವಾರ, 13 ಏಪ್ರಿಲ್ 2019 (18:08 IST)
ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು ಅಭ್ಯರ್ಥಿಗಳು ಕಾಲಿಗೆ ಚಕ್ರಕಟ್ಟಿಕೊಟ್ಟಿಕೊಂಡು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.

ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ ಎಚ್.ಬಿ.ಮಂಜಪ್ಪ, ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಾದ್ಯಂತ ಬಿರುಸಿನ ಪ್ರಚಾರ ನಡೆಸಿದರು. ತಾಲ್ಲೂಕಿನ ದುಗ್ಗತ್ತಿ, ಕಡತಿ, ಹಲವಾಗಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮತಯಾಚನೆ ನಡೆಸಿದ ಮಂಜಪ್ಪ, ತಮಗೆ ಮತ ನೀಡುವಂತೆ ಮತದಾರರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಂಜಪ್ಪ, ಬಿಜೆಪಿ ಅಭ್ಯರ್ಥಿ ಜಿ.ಎಂ.ಸಿದ್ದೇಶ್ವರ್ ಕಳೆದ 15 ವರ್ಷಗಳಿಂದ ಶೂನ್ಯ ಸಾಧನೆ ಮಾಡಿದ್ದಾರೆ. ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಧಿಯಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಅವರು ತಾವು ಮಾಡಿದ್ದು ಎಂದು ತೋರಿಸುತ್ತಿದ್ದಾರೆ. ಈ ಬಾರಿ ಕ್ಷೇತ್ರದ ಜನರು ಬದಲಾವಣೆ ಬಯಸಿದ್ದು, ನನ್ನ ಗೆಲುವು ಶತಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ