ಈ ಬಾರಿಯ ಚುನಾವಣೆಯಲ್ಲಿ ಯುಪಿಎಗೆ ಹೆಚ್ಚು ಬಹುಮತ ಎಂದ ಹೆಚ್.ಡಿ. ದೇವೇಗೌಡರು

ಗುರುವಾರ, 18 ಏಪ್ರಿಲ್ 2019 (12:43 IST)
ಮೈಸೂರು : ರಾಜ್ಯದ 14 ಲೋಕಸಭಾ ಚುನಾವಣೆಗೆ ಇಂದು ಮೊದಲ ಹಂತದ ಮತದಾನ ನಡೆಯುತ್ತಿದ್ದು, ಈ ಬಾರಿಯ ಚುನಾವಣೆಯಲ್ಲಿ ಯುಪಿಎಗೆ ಹೆಚ್ಚು ಬಹುಮತ ಬರಲಿದ್ದು, ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಇಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಪಡುವಲಹಿಪ್ಪೆ ಗ್ರಾಮದಲ್ಲಿ ಕುಟುಂಬ ಸಮೇತ ಆಗಮಿಸಿ ಮತ ಚಲಾಯಿಸಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿ 14 ಲೋಕಸಭಾ ಕ್ಷೇತ್ರಗಳಲ್ಲಿ 10 ಕ್ಷೇತ್ರಗಳನ್ನು ಗೆಲುತ್ತೇವೆ. ಮಂಡ್ಯ, ಹಾಸನ, ತುಮಕೂರು, ಮೈಸೂರು, ಚಿಕ್ಕಬಳ್ಳಾಪುರಗಳಲ್ಲಿ ಗೆಲುವು ಸಾಧಿಸುತ್ತೇವೆ ಎಂದು ಹೇಳಿದ್ದಾರೆ.


ಪ್ರಧಾನಿಯವರ ಘನತೆಗೆ ಈ ಹೇಳಿಕೆ ಗೌರವ ತರುವುದಿಲ್ಲ. ಈ ಬಾರಿ ಬಿಜೆಪಿಗೆ ಬಹುಮತ ಬರುವುದಿಲ್ಲ. ಯುಪಿಎಗೆ ಹೆಚ್ಚು ಬಹುಮತ ಬರಲಿದ್ದು, ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ