ನವದೆಹಲಿ : ಇಡೀ ದೇಶದ ಜನತೆ ಕುತೂಹಲದಿಂದ ಕಾಯುತ್ತಿರುವ ಲೋಕಸಭಾ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ.
ಮತಏಣಿಕೆಯ ಕಾರ್ಯ ಬೆಳಗ್ಗೆ 8 ಗಂಟೆಯಿಂದ ಶುರುವಾಗಲಿದೆ. ಬೆಳಗ್ಗೆ 7 ಗಂಟೆಗೆ ಸ್ಟ್ರಾಂಗ್ ರೂಮ್ ಗಳು ಓಪನ್ ಆಗಿದ್ದು, ಮೊದಲಿಗೆ ಅಂಚೆ ಮತ ಎಣಿಕೆ ನಡೆದು ಆಮೇಲೆ ಇವಿಎಂ ಎಣಿಕೆ ಶುರುವಾಗಲಿದೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಮೊದಲ ಫಲಿತಾಂಶ ಹೊರಬರಲಿದ್ದು ಸಂಜೆ 6 ಗಂಟೆಯ ವೇಳೆಗೆ ಎಲ್ಲಾ ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಲಾಗಿದೆ.
ಸುಪ್ರೀಂ ಆದೇಶದಂತೆ ಪ್ರತಿ ಕ್ಷೇತ್ರದಲ್ಲೂ ಇವಿಎಂಗಳ ಜೊತೆ 5 ವಿವಿಪ್ಯಾಟ್‍ಗಳ ತಾಳೆ ನಡೆಯಲಿದೆ. ಈ ಬಾರಿಯ ಎಕ್ಸಿಟ್ ಪೋಲ್ ಸಮೀಕ್ಷೆಗಳು ಮತ್ತೆ ಎನ್‍ಡಿಎ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಮತ್ತೊಮ್ಮೆ ಮೋದಿ ಪ್ರಧಾನಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.