ಮಹಾಶಿವರಾತ್ರಿಗೆ ಉಪವಾಸ ಏಕೆ ಮಾಡ್ತಾರೆ ಗೊತ್ತ?

ಮಂಗಳವಾರ, 1 ಮಾರ್ಚ್ 2022 (07:30 IST)
ಇಂದು ಮಹಾಶಿವರಾತ್ರಿ ಹಬ್ಬವನ್ನು ಭಾರತಾದ್ಯಂತ ಅದ್ಧೂರಿಯಾಗಿ ಆಚರಿಸಲಾಗುತ್ತದೆ. 

ಸೋಮವಾರ ಶಿವನಿಗೆ ಬಹಳ ಇಷ್ಟವಾದ ದಿನ. ಆದರೆ ಈ ಬಾರಿ ಹಬ್ಬ ಮಂಗಳವಾರ ಬಂದಿದೆ.

ಶಿವನ ಪೂಜೆ ಮಾಡುವುದು ಹೇಗೆ?

ಮಹಾಶಿವರಾತ್ರಿ ದಿನ ಹಸುವಿನ ತುಪ್ಪದ ಜೊತೆ ಕರ್ಪೂರವನ್ನು ಬೆರೆಸಿ ಮೃತ್ಯುಂಜಯ ಮಂತ್ರವನ್ನು ಪಠಿಸಬೇಕು. ಈ ದಿನ ರುದ್ರಾಕ್ಷಿಯ ಮಾಲೆ ಧರಿಸಿದರೆ ಒಳ್ಳೆಯದಾಗುತ್ತದೆ ಎಂದು ಹೇಳಲಾಗುತ್ತದೆ.

ಹಸಿ ಹಾಲಿನಲ್ಲಿ ಗಂಗಾ ಜಲವನ್ನು ಬೆರೆಸಿ ಶಿವನಿಗೆ ಅಭಿಷೇಕ ಮಾಡಬೇಕು. ನಂತರ ಚಂದನ, ಹೂ, ದೀಪ ಹಾಗೂ ಧೂಪ ಹಚ್ಚಿ ಪೂಜೆ ಮಾಡಬೇಕು.

ವ್ರತದ ಮಹತ್ವವೇನು?

ಮಹಾಶಿವರಾತ್ರಿ ಹಬ್ಬದಂದು ವ್ರತ ಮಾಡುವುದರಿಂದ ಪಾಪ ದೂರ ಆಗುತ್ತದೆ ಹಾಗೂ ಆತ್ಮ ಶುದ್ಧ ಆಗುತ್ತದೆ. ಎಲ್ಲೆಲ್ಲಿ ಶಿವಲಿಂಗವನ್ನು ಸ್ಥಾಪಿಸಲಾಗುತ್ತದೋ ಅಲ್ಲಿ ಶಿವ ಖಂಡಿತವಾಗಿಯೂ ಇರುತ್ತಾನೆ ಎಂಬುದು ಜನರ ನಂಬಿಕೆ.

ಮಹಾಶಿವರಾತ್ರಿ ಇಡೀ ದಿನ ಶ್ರದ್ಧೆಯಿಂದ ವ್ರತ ಮಾಡಿದರೆ, ಶಿವ ಎಲ್ಲ ಕಷ್ಟಗಳನ್ನು ದೂರ ಮಾಡುತ್ತಾನೆ ಎನ್ನುವ ನಂಬಿಕೆಯಿದೆ. ಮಹಾಶಿವರಾತ್ರಿ ದಿನ ಮಾಡುವ ವ್ರತ ಪ್ರಭಾವಶಾಲಿ ಎಂದು ಹಿರಿಯರು ಹೇಳುತ್ತಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ