ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೇರೆಯುತ್ತಿದ್ದು, ದಿನೇ ದಿನೇ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ.
ಬೆಂಗಳೂರಿನಲ್ಲಿ ಇಂದು ಕೊರೊನಾ ವೈರಸ್ ಗೆ 4 ಮಂದಿ ಸಾವನಪ್ಪಿದ್ದಾರೆ. ಕೊರೊನಾ ಸೋಂಕು ಇರುವ ಹಿನ್ನಲೆಯಲ್ಲಿ ಈ ನಾಲ್ವರಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ನಾಲ್ವರು ಸಾವನಪ್ಪಿದ್ದಾರೆ. ಆ ಮೂಲಕ ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 25ಕ್ಕೇರಿಕೆಯಾಗಿದೆ.