ಹಗಲು – ರಾತ್ರಿ ಲೈಂಗಿಕ ಕ್ರಿಯೆ ನಡೆಸಿದ್ರೂ ಮಕ್ಕಳೇ ಆಗುತ್ತಿಲ್ಲ
ಮಂಗಳವಾರ, 10 ಡಿಸೆಂಬರ್ 2019 (16:00 IST)
ಸಮಸ್ಯೆ : ಸರ್ ನನಗೀಗ 30 ವರ್ಷ . ನನ್ನ ಯಜಮಾನರಿಗೆ 35 ವರ್ಷವಾಗಿದೆ . ಮದುವೆಯಾಗಿ ನಾಲ್ಕು ವರ್ಷ ಕಳೆದರೂ ಇನ್ನೂ ಮಕ್ಕಳಾಗಿಲ್ಲ . ವೈದ್ಯರಲ್ಲಿಗೆ ತೋರಿಸಿದಾಗ ನನಗೆ ಹಾಗೂ ಪತಿಗೆ ಯಾವುದೇ ಸಮಸ್ಯೆಯಿಲ್ಲ ಎಂದು ತಿಳಿಸಿದ್ದಾರೆ . ನಾವಿಬ್ರೂ ತುಂಬಾ ಚೆನ್ನಾಗಿ ಇದ್ದೇವೆ .
ಮಗು ಬೇಕೆಂದು ಹಗಲು ರಾತ್ರಿ ಎನ್ನದೇ ಸುಖ ಅನುಭವಿಸುತ್ತೇವೆ . ಆದರೂ ಯಾಕೆ ಮಕ್ಕಳಾಗಿಲ್ಲ . ಇದು ನಮಗೆ ದೊಡ್ಡ ಚಿಂತೆಯಾಗಿದೆ . ಗೆಳೆಯನಿಂದ ಮಗು ಪಡೆಯಲು ಮುಂದಾಗಲೇ ? ಪರಿಹಾರ ತಿಳಿಸಿ .
ಸಲಹೆ : ನಿಮಗಿನ್ನೂ ಮಕ್ಕಳಾಗುವ ಸಾಧ್ಯತೆ ಹೆಚ್ಚಿದೆ . ಅಲ್ಲದೆ ವೈದ್ಯರು ನಿಮಗಿಬ್ಬರಿಗೂ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿರುವಾಗ ಯಾವುದಕ್ಕೂ ಚಿಂತೆ ಪಡುವ ಅಗತ್ಯವಿಲ್ಲ .
ಸಾಮಾನ್ಯವಾಗಿ ಲೈಂಗಿಕ ಕ್ರಿಯೆಯ ಅಂತ್ಯದಲ್ಲಿ ವೀರ್ಯಾಣು ಅಂಡಾಣುವಿನೊಂದಿಗೆ ಸಂಯೋಗ ಹೊಂದದೇ ಇರುವುದೂ ಗರ್ಭಧಾರಣೆಯ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ . ಇಂಥ ಸಂದರ್ಭಗಳಿಂದ ಅಂಡಾಣು ಫಲಿತವಾಗುವುದು ಕಷ್ಟವಾಗುತ್ತದೆ . ಒಂದು ಋತುಚಕ್ರದ ನಿಗದಿತ ದಿನಗಳಲ್ಲಿ ಲೈಂಗಿಕ ಕ್ರಿಯೆಯಲ್ಲಿ ತೊಡಗದಿದ್ದಲ್ಲಿ ಅಂಡಾಣು ಭ್ರೂಣ ಕಟ್ಟುವಲ್ಲಿ ವಿಫಲವಾಗುತ್ತದೆ . ವಿವಾಹಿತರ ನಡುವೆ ಈ ದಿನಗಳಲ್ಲಿ ಮಿಲನವಾಗದೇ ಇರುವಂಥ ಪರಿಸ್ಥಿತಿಗಳಲ್ಲಿ ಗರ್ಭಧಾರಣೆ ಕಷ್ಟವಾಗುತ್ತದೆ .
ಬಹುತೇಕ ಮಹಿಳೆಯರು ತಮ್ಮ ಕುಟುಂಬವನ್ನು ಆರಂಭಿಸಲು ಯೋಚಿಸುವುದೇ 30 ರ ನಂತರ . ಕೆಲವು ಈ ಅವಧಿಯಲ್ಲಿ ಮಹಿಳೆಯರು ತಮ್ಮ ಗರ್ಭಾವಸ್ಥೆಯಲ್ಲಿ ಸಮಸ್ಯೆಗಳನ್ನು ಎದುರಿಸುತ್ತಾರೆ . ವೈದ್ಯರ ಸಲಹೆ ಪಡೆದುಕೊಂಡು ಮುಂದುವರಿಯಿರಿ.
ಆ್ಯಪ್ನಲ್ಲಿ ವೀಕ್ಷಿಸಿ x