ನಿಮ್ಮ ಕೂದಲು ಬೇಗ ಉದ್ದವಾಗಿ ಬೆಳೆಯಬೇಕೆಂದರೆ ಹೀಗೆ ಮಾಡಿ

ಗುರುವಾರ, 14 ಮಾರ್ಚ್ 2019 (07:08 IST)
ಬೆಂಗಳೂರು : ಕೂದಲು ಕೂಡ ನಿಮ್ಮ ಅಂದವನ್ನು ಹೆಚ್ಚಿಸುತ್ತದೆ. ಆದ್ದರಿಂದ ಕೆಲವರಿಗೆ ತಮ್ಮ ಕೂದಲು ಉದ್ದವಾಗಿ ಬೆಳೆಯಬೇಕೆಂಬ ಆಸೆ ಇರುತ್ತದೆ. ನಿಮ್ಮ ಕೂದಲು ಬಹಳ ಬೇಗ ಉದ್ದವಾಗಿ, ಸೊಂಪಾಗಿ ಬೆಳೆಯಬೇಕೆಂದರೆ ಹೀಗೆ ಮಾಡಿ.


10-15 ಸೀಬೆ ಮರದ ಎಲೆಗಳನ್ನು ತೆಗೆದುಕೊಂಡು ಬಂದು ಅದನ್ನು ಚೆನ್ನಾಗಿ ಕ್ಲೀನ್ ಮಾಡಿ. ನಂತರ ಒಂದು ಪಾತ್ರೆಯಲ್ಲಿ 500 ನಷ್ಟು ನೀರು ತೆಗೆದುಕೊಂಡು ಆ ಎಲೆಗಳನ್ನು ಅದಕ್ಕೆ ಹಾಕಿ ಚೆನ್ನಾಗಿ10-15 ನಿಮಿಷ  ಕುದಿಸಿ. ನಂತರ ಅದು ತಣ್ಣಗಾದ ಮೇಲೆ ಅದನ್ನು ನಿಮ್ಮ ಕೂದಲಿಗೆ ಹಚ್ಚಿ ಚೆನ್ನಾಗಿ ಮಸಾಜ್ ಮಾಡಬೇಕು. ನಂತರ ಹರ್ಬಲ್ ಶಾಂಪು ಬಳಸಿ ಸ್ನಾನ ಮಾಡಿ. 


ಹೀಗೆ ಮಾಡುವುದರಿಂದ ನಿಮ್ಮ ಕೂದಲು  ಉದ್ದವಾಗಿ ಬೆಳೆಯುವುದರ ಜೊತೆಗೆ ಕೂದಲುದುರುವ ಸಮಸ್ಯೆ ಸಂಪೂರ್ಣವಾಗಿ ಕಡಿಮೆಯಾಗುತ್ತದೆ. ಅಷ್ಟೇ ಅಲ್ಲ ಬೊಕ್ಕ ತಲೆ ಸಮಸ್ಯೆ ಕೂಡ ನಿವಾರಣೆಯಾಗುತ್ತದೆ.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ