ಒಣದ್ರಾಕ್ಷಿ ನೆನೆಸಿದ ನೀರನ್ನು ಕುಡಿದರೆ ಏನಾಗುತ್ತದೆ ಗೊತ್ತಾ?
ಮಂಗಳವಾರ, 9 ಏಪ್ರಿಲ್ 2019 (10:05 IST)
ಬೆಂಗಳೂರು : ಒಣದ್ರಾಕ್ಷಿ ಹಣ್ಣನ್ನು ಎಲ್ಲರೂ ಇಷ್ಟಪಡುತ್ತಾರೆ. ಅದರಲ್ಲೂ ಅದನ್ನು ತಿನ್ನಲು ತುಂಬಾ ಸಿಹಿಯಾಗಿರುತ್ತದೆ. ಅದನ್ನು ಹಾಗೇ ತಿನ್ನುವ ಬದಲು ನೀರಿನಲ್ಲಿ ನೆನೆಸಿ ತಿಂದರೆ ಆರೋಗ್ಯಕ್ಕೆ ತುಂಬಾ ಉತ್ತಮ.
ಹೌದು. ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ಕುದಿಸಿದ ನೀರನ್ನು ಕುಡಿಯುವುದರಿಂದ ಮಲಬದ್ಧತೆ, ಎಸಿಡಿಟಿ ಹಾಗೂ ಆಯಾಸ ಸಮಸ್ಯೆ ಕಡಿಮೆಯಾಗುತ್ತದೆ. ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. ಇದು ದೇಹದಲ್ಲಿರುವ ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡಲು ನೆರವಾಗುತ್ತದೆ.
ಒಣದ್ರಾಕ್ಷಿ ಕುದಿಸಿಟ್ಟ ನೀರು ಮುಖದ ಮೇಲಿನ ಸುಕ್ಕನ್ನು ಕಡಿಮೆ ಮಾಡಿ ಸೌಂದರ್ಯ ವೃದ್ಧಿಸುವ ಕೆಲಸ ಮಾಡುತ್ತದೆ. ಮಲಬದ್ಧತೆ ಹಾಗೂ ಅಜೀರ್ಣ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಜೀರ್ಣಾಂಗ ಸರಿಯಾಗಿ ಕೆಲಸ ಮಾಡುತ್ತದೆ. ಪ್ರತಿದಿನ ಈ ನೀರು ಕುಡಿಯುವುದರಿಂದ ಲಿವರ್ ಆರೋಗ್ಯವಾಗಿರುತ್ತದೆ. ಚಯಾಪಚಯ ಮಟ್ಟವನ್ನು ನಿಯಂತ್ರಿಸುತ್ತದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.