ಪಲಾವ್ ಎಲೆ ಸೇವಿಸಿದರೆ ಏನಾಗುತ್ತದೆ ಗೊತ್ತಾ?

ಶನಿವಾರ, 3 ಏಪ್ರಿಲ್ 2021 (06:39 IST)
ಬೆಂಗಳೂರು : ಪಲಾವ್ ಎಲೆಗಳನ್ನು ಪರಿಮಳ ಹೆಚ್ಚಿಸಲು  ಅಡುಗೆಯಲ್ಲಿ ಬಳಸಲಾಗುತ್ತದೆ. ಅಲ್ಲದೇ ಇದನ್ನು ಆಯುರ್ವೇದದ ಚಿಕಿತ್ಸೆಯಲ್ಲಿ ಬಳಸಲಾಗುತ್ತದೆ. ಇದನ್ನು ಬಳಸುವುದರಿಂದ ಯಾವೆಲ್ಲಾ ಆರೋಗ್ಯ ಪ್ರಯೋಜನವಿದೆ ಎಂಬುದನ್ನು ತಿಳಿದುಕೊಳ್ಳೋಣ.

ಪಲಾವ್ ಎಲೆಗಳನ್ನು ನೀರಿನಲ್ಲಿ ಕುದಿಸಿ ಸೇವಿಸಿ. ಇದರಲ್ಲಿ ಖನಿಜಗಳು, ಪ್ರೋಟೀನ್, ಫೈಬರ್, ಕ್ಯಾಲ್ಸಿಯಂ, ಹೇರಳವಾಗಿದೆ. ಇದನ್ನು ಸೇವಿಸುವುದರಿಂದ ಮೈಗ್ರೇನ್ ಸಮಸ್ಯೆ ನಿವಾರಣೆಯಾಗುತ್ತದೆ. ಮಧುಮೇಹ, ತಲೆನೋವು, ಮೂಗಿನಲ್ಲಾದ ಅಲರ್ಜಿ, ನೆಗಡಿ, ಕೆಮ್ಮು, ಬ್ಯಾಕ್ಟೀರಿಯಾ, ವೈರಸ್ ಸೋಂಕು ಬಹಳಷ್ಟು ಸಮಸ್ಯೆ ದೂರವಾಗುತ್ತದೆ.

ಆದರೆ ಇದನ್ನು ನಿಯಮಿತವಾಗಿ ಸೇವಿಸಿ ½ ಚಮಚ ಅಥವಾ ½ ಎಲೆಗಿಂತ ಅಧಿಕವಾಗಿ ಸೇವಿಸಿದರೆ ಅತಿಸಾರ ಅಥವಾ ವಾಂತಿಗೆ ಕಾರಣವಾಗಬಹುದು. ಹಾಗೇ ಗರ್ಭಿಣಿಯರು, ಗ್ಯಾಸ್ಟ್ರಿಕ್ ಸಮಸ್ಯೆ ಇರುವವರು ಇದನ್ನು ತಪ್ಪಿಸಬೇಕು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ