ಊಟ ಮಾಡಿದ ನಂತರ ಸ್ನಾನ ಮಾಡಿದರೆ ಏನಾಗುತ್ತದೆ ಗೊತ್ತಾ?

ಗುರುವಾರ, 5 ಡಿಸೆಂಬರ್ 2019 (06:03 IST)
ಬೆಂಗಳೂರು : ಊಟ ಮಾಡಿದ ತಕ್ಷಣ ಸ್ನಾನ ಮಾಡುವ ಅಭ್ಯಾಸ ಕೆಲವರಿಗಿದೆ. ಆದರೆ ಇದು ಆರೋಗ್ಯಕ್ಕೆ ಉತ್ತಮವೇ? ಅಲ್ಲವೇ ಎಂಬ ಅರಿವು ಅವರಿಗಿರುವುದಿಲ್ಲ. ಅಂತವರು ಮೊದಲು ಈ ಬಗ್ಗೆ ತಿಳಿದುಕೊಳ್ಳಿ.



ಊಟ ಅಥವಾ ತಿಂಡಿ ಮಾಡಿದ ನಂತರ ಸ್ನಾನ ಮಾಡುವುದು ಆರೋಗ್ಯಕರವಲ್ಲ ಎಂದು ಸಂಶೋಧನೆಯೊಂದು ತಿಳಿಸಿದೆ. ಯಾಕೆಂದರೆ ಸ್ನಾನ ಮಾಡಿದ ನಂತರ ದೇಹದ ತಾಪಮಾನ ಕಡಿಮೆಯಾಗುತ್ತದೆ. ಇದು ಜೀರ್ಣ ಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ.


ಜೊತೆಗೆ ರಕ್ತ ಸಂಚಾರದ ಮೇಲೂ ಪ್ರಭಾವ ಬೀರುತ್ತದೆ. ಆದ್ದರಿಂದ ಊಟದ ನಂತರ ಸ್ನಾನ ಮಾಡಿದರೆ ಆರೋಗ್ಯ ಹಾಳಾಗುತ್ತದೆ ಎಂದು ತಜ್ಞರು ಹೇಳುತ್ತಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ