ಕಿವಿ ಮತ್ತು ಮಾವಿನ ಹಣ್ಣಿನ ಸಿಪ್ಪೆ ತಿನ್ನುವುದರಿಂದ ಏನಾಗುತ್ತದೆ ಗೊತ್ತಾ?

ಗುರುವಾರ, 4 ಮಾರ್ಚ್ 2021 (07:15 IST)
ಬೆಂಗಳೂರು : ಕಿವಿ ಹಣ್ಣು ಮತ್ತು ಮಾವಿನ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಇದರ ಸಿಪ್ಪೆಗಳು ಕೂಡ ಹೆಚ್ಚಿನ ಪೋಷಕಾಂಶಗಳನ್ನು ಒಳಗೊಂಡಿದ್ದು, ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ.

ಕಿವಿ ಹಣ್ಣಿನ ಸಿಪ್ಪೆಯಲ್ಲಿ ಸಾಕಷ್ಟು ಫೈಬರ್, ಆ್ಯಂಟಿ ಆಕ್ಸಿಡೆಂಟ್ ಗಳು, ವಿಟಮಿನ್ ಸಿ, ಇದ್ದು, ಇದು ರೋಗ ನಿರೊಧಕ ಶಕ್ತಿ, ಹೃದಯ ಮತ್ತು ಶ್ವಾಸಕೋಶದ ಆರೋಗ್ಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಮಾವಿನ ಹಣ್ಣಿನ ಸಿಪ್ಪೆಯಲ್ಲಿ ಆ್ಯಂಟಿ ಆಕ್ಸಿಡೆಂಟ್ ಗಳಿದ್ದು, ಇದು ಸ್ವತಂತ್ರ ರಾಡಿಕಲ್ಸ್ ಗಳಿಂದ ಉಂಟಾಗುವ ಹಾನಿಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದಲ್ಲದೇ ಇದು ತೂಕ ನಷ್ಟ ಮತ್ತು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ