ಡ್ರ್ಯಾಗನ್ ಫ್ರೂಟ್ ಹೆಚ್ಚಿನ ನಾರಿನಾಂಶ, ಲಿಯೋ ಕ್ಯಾಪಸ್, ಪ್ರೋಟೀನ್, ವಿಟಮಿನ್-ಸಿ, ಕಾರ್ಟಿನ್, ಕ್ಯಾಲ್ಸಿಯಂ, ಫಾಸ್ಪರಸ್, ಕಬ್ಬಿಣಾಂಶ, ಪೋಟೋ ನ್ಯೂಟ್ರಿಯೆಂಟ್ಸ್, ಓಮೇಗಾ-3 ಮತ್ತು ಒಮೇಗಾ-6 ಫೇತ್ ಆಸಿಡ್ಸ್ ಅಂಶಗಳನ್ನು ಹೊಂದಿದೆ. ಕಡಿಮೆ ಕ್ಯಾಲೋರಿ ಹೊಂದಿರುವ ಡ್ರ್ಯಾಗನ್ ಫ್ರೂಟ್ ಹಲವಾರು ರೋಗಗಳಿಗೆ ರಾಮಬಾಣವಾಗಿದೆ.
- ಇದು ಕಡಿಮೆ ಪ್ರಮಾಣದ ಕೊಲೆಸ್ಟ್ರಾಲ್ ಹೊಂದಿರುವುದರಿಂದ ದೇಹದ ತೂಕವನ್ನು ಇಳಿಸಲು ಇದು ಸಹಕಾರಿಯಾಗಿದೆ.
- ಡ್ರ್ಯಾಗನ್ ಫ್ರೂಟ್ ಪಾಲಿಫಿನಾಲ್‌ಗಳು, ಕ್ಯಾರೊಟಿನಾಯ್ಡ್‌ಗಳು, ಥಿಯೊಲ್‌ಗಳು, ಟಕೋಫೆರಾಲ್ ಮತ್ತು ಗ್ಲುಕೋಸಿನೋಲೇಟ್‌ಗಳ ಸಮೃದ್ಧ ಮೂಲವಾಗಿದ್ದು, ಇವೆಲ್ಲವೂ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ.
- ಡ್ರ್ಯಾಗನ್ ಫ್ರೂಟ್ ಒಮೇಗಾ 3, ಪ್ಯಾಟಿ ಆಸಿಡ್‌ಗಳನ್ನು ಹೊಂದಿರುವುದರಿಂದ ಹೃದಯದ ಆರೋಗ್ಯಕ್ಕೆ ಸಹಕರಿಸುತ್ತದೆ.
- ಡ್ರ್ಯಾಗನ್ ಫ್ರೂಟ್ ಸೇವನೆಯಿಂದ ಫ್ರೀ ರ್ಯಾಡಿಕಲ್‌ಗಳಿಂದ ಚರ್ಮಕ್ಕೆ ಆಗುವ ತೊಂದರೆಯನ್ನು ತಡೆಯಬಹುದು.
- ಡ್ರ್ಯಾಗನ್ ಫ್ರೂಟ್ ಹೆಚ್ಚಿನ ಫೈಬರ್ ಅಂಶವಿನ್ನು ಹೊಂದಿರುವ ಕಾರಣ ಇದು ನಿಮ್ಮ ದೇಹದ ಕೆಟ್ಟ ಜೀರ್ಣಕ್ರಿಯೆ ಪ್ರಕ್ರಿಯೆಯನ್ನು ಉತ್ತಮಗೊಳಿಸಿ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುತ್ತೆ.
- ಇದರಲ್ಲಿರುವ ವಿಟಮಿನ್ ಸಿ ಅಂಶವು ಚರ್ಮದ ಕಳೆಗುಂದುವಿಕೆಯ ವಿರುದ್ಧ ಸೆಣಸುತ್ತೆ ಮತ್ತು ನಿಮ್ಮ ಹೊಳಪಿನಿಂದ ಕೂಡಿರುವಂತೆ ಮಾಡುತ್ತದೆ.
- ಇದು ಅತ್ಯಧಿಕ ಖನಿಜಾಂಶಗಳನ್ನು ಹೊಂದಿರುವ ಕಾರಣ ಇದು ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ.
- ಡ್ರ್ಯಾಗನ್ ಫ್ರೂಟ್‌ನಲ್ಲಿ ವಿಟಮಿನ್ ಸಿ ಹಾಗೂ ಎ ಅಂಶಗಳು ಹೆಚ್ಚಿದ್ದು, ಇದು ಮೆದುಳನ್ನು ಚುರುಕುಗೊಳಿಸುತ್ತದೆ.
- ಇದು ಕ್ಯಾನ್ಸರ್‌ನಂತಹ ರೋಗಗಳಿಗೆ ರಾಮಬಾಣವಾಗಿದೆ.
- ಡ್ರಾಗನ್ ಫ್ರೂಟ್‌ನಲ್ಲಿ ಫೈಬರ್ ಹೇರಳವಾಗಿದ್ದು ಇದು ಗ್ಯಾಸ್, ಅಸಿಡಿಟಿ, ಮಲಬದ್ದತೆಯನ್ನು ಕಡಿಮೆ ಮಾಡುತ್ತದೆ.
- ಡ್ರ್ಯಾಗನ್ ಫ್ರೂಟ್‌ನಲ್ಲಿ ಅಧಿಕ ಮಟ್ಟದ ವಿಟಮಿನ್ ಸಿ ಅಂಶವಿರುವುದರಿಂದ ಕೂದಲಿಗೆ ಹೊಳಪನ್ನು ನೀಡುತ್ತದೆ.
- ಇದು ವಿಟಮಿನ್ ಬಿ3 ಅಂಶವನ್ನು ಅಧಿಕವಾಗಿದೆ ಹೊಂದಿದ್ದು ಸೂರ್ಯನ ಕಿರಣಗಳಿಂದ ನಿಮ್ಮ ಚರ್ಮದ ಮೇಲಾಗುವ ಹಾನಿಯನ್ನು ತಪ್ಪಿಸುತ್ತದೆ.
- ಇದರ ಸೇವನೆಯಿಂದ ಶ್ವಾಸಕೋಶ ಸಮಸ್ಯೆಗಳು ಉಪಶಮನವಾಗುತ್ತದೆ.
- ಇದರ ಸೇವನೆಯಿಂದ ರಕ್ತ ಹೀನತೆ ದೂರ ಮಾಡಬಹುದು.
- ಇದು ಗರ್ಭಿಣಿಯರಿಗೆ ಹೆಚ್ಚಿನ ಪೌಷ್ಟಿಕಾಂಶಗಳನ್ನು ಒದಗಿಸುತ್ತದೆ.
- ಇದು ಬಿಳಿಯ ರಕ್ತಕಣಗಳನ್ನು ಹೆಚ್ಚಿಸುತ್ತದೆ ಮತ್ತು ಡೆಂಘೀ ಜ್ವರದಂತಹ ರೋಗಗಳಿಗೆ ಸಿದ್ಧ ಔಷಧಿಯಾಗಿದೆ.
- ಡ್ರ್ಯಾಗನ್ ಫ್ರೂಟ್ ಮೂಳೆ ಮತ್ತು ಹಲ್ಲುಗಳನ್ನು ಬಲಿಷ್ಠಗೊಳಿಸುತ್ತದೆ.