ಸೋರೆ ಕಾಯಿಯಲ್ಲಿ ಪೊಟ್ಯಾಸಿಯಂ, ವಿಟಮಿನ್ ಸಿ, ವಿಟಮಿನ್ ಬಿ, ಕಬ್ಬಿಣ, ಸೋಡಿಯಂ ಹೇರಳವಾಗಿರುತ್ತದೆ. ಸೋರೆಕಾಯಿಗೆ ಶುಂಠಿ ಮಿಕ್ಸ್ ಮಾಡಿ ಜ್ಯೂಸ್ ಮಾಡಿ ಕುಡಿಯುವುದರಿಂದ ರಕ್ತದಲ್ಲಿರುವ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
ಹಾಗೇ ಇದನ್ನು ಸೇವಿಸುವುದರಿಂದ ರಕ್ತದಲ್ಲಿರುವ ಕೊಲೆಸ್ಟ್ರಾಲ್ ಮಟ್ಟ ಸಮಪ್ರಮಾಣದಲ್ಲಿದ್ದು ಹೃದಯ ಸಂಬಂಧಿ ಕಾಯಿಲೆ ಬರದಂತೆ ತಡೆಯುತ್ತದೆ. ಇದು ರಕ್ತವನ್ನು ಶುದ್ಧೀಕರಿಸುವುದಲ್ಲದೇ ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ.