ಆರೋಗ್ಯಕರ ಮೂಲಂಗಿ

ಬುಧವಾರ, 20 ಜೂನ್ 2018 (18:11 IST)
ಮೂಲಂಗಿಯಲ್ಲಿ ಮ್ಯಾಂಗನೀಸ್, ತಾಮ್ರ, ಸತು, ಫೋಲೇಟ್, ಕ್ಯಾಲ್ಸಿಯಂ, ಪೊಟ್ಯಾಶಿಯಂ, ವಿಟಮಿನ್ ಎ, ಸಿ, ಬಿ6 ಮೊದಲಾದವು ಹೆಚ್ಚಿನ ಪ್ರಮಾಣದಲ್ಲಿ ಇರುವುದರಿಂದ ಇದು ಆರೋಗ್ಯದ ಮೇಲೆ ಉತ್ತಮ ಪರಿಣಾಮವನ್ನು ಬೀರುತ್ತದೆ. ಇದರಲ್ಲಿರುವ ಉತ್ತಮ ಪ್ರಮಾಣದ ಕರಗುವ ಮತ್ತು ಕರಗದ ನಾರು ಜೀರ್ಣಕ್ರಿಯೆಯಲ್ಲಿ ಸಹಕರಿಸುವ ಮೂಲಕ ಇದೊಂದು ಉತ್ತಮವಾದ ತರಕಾರಿಯಾಗಿದೆ.
* ಮೂಲಂಗಿ ಸೇವನೆಯಿಂದ ಅದರಲ್ಲಿರುವ ವಿಟಿಮಿನ್ ಸಿ ನಮ್ಮ ದೇಹದಲ್ಲಿ ರಕ್ತಕಣಗಳನ್ನು ಹೆಚ್ಚಿಸುವುದಲ್ಲದೆ ರೋಗ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. 
 
* ಮೂಲಂಗಿ ಸೇವನೆಯು ಕ್ಯಾನ್ಸರ್ ಬರುವುದನ್ನೂ ತಡೆಯಬಲ್ಲದು. 
 
* ಮೂಲಂಗಿ ಸೇವನೆಯಿಂದ ಕೆಂಪು ರಕ್ತಕಣಗಳ ಬೆಳವಣಿಗೆ ಹಾಗೂ ಕಾಮಾಲೆ ರೋಗವನ್ನು ಕಡಿಮೆ ಮಾಡುತ್ತದೆ.
 
* ಮೂಲಂಗಿ ಬೀಜವನ್ನು ನಿಂಬೆರಸದಲ್ಲಿ ಅರೆದು ಹಚ್ಚುವುದರಿಂದ ಹುಳುಕಡ್ಡಿ, ತುರಿಕೆ ರೋಗಗಳನ್ನು ಗುಣಪಡಿಸಬಹುದು.
 
* ಮೂತ್ರಕೋಶ ಮತ್ತು ಮೂತ್ರಪಿಂಡವನ್ನು ಶುದ್ಧೀಕರಿಸಲು ಸಹಕಾರಿಯಾದ ಮೂಲಂಗಿ ಸೇವನೆಯಿಂದ ಉರಿಮೂತ್ರ ಮುಂತಾದ ಮೂತ್ರ ಸಂಬಂಧಿ ಕಾಯಿಲೆಗಳಿಂದ ಮುಕ್ತಿ ಹೊಂದಬಹುದು.
 
* ಹಸಿ ಮೂಲಂಗಿಯ ಚೂರುಗಳಿಗೆ ನಿಂಬೆರಸ, ಕಾಳು ಮೆಣಸಿನಪುಡಿ ಮತ್ತು ಉಪ್ಪು ಬೆರೆಸಿ ತಿನ್ನುವುದರಿಂದ ಕಾಮಾಲೆ ರೋಗ, ಕಣ್ಣಿನ ತೊಂದರೆ, ಅಜೀರ್ಣ ನಿವಾರಣೆಯಾಗುತ್ತದೆ.
 
* ಮೂಲಂಗಿ ರಸದ ಜೊತೆ ಹಾಲಿನ ಕೆನೆಯನ್ನು ಮಿಶ್ರಣ ಮಾಡಿ ಮುಖಕ್ಕೆ ಹಚ್ಚುವುದರಿಂದ ಮೊಡವೆಗಳು ಕಡಿಮೆಯಾಗುತ್ತದೆ.
 
* ಜ್ವರದಿಂದ ದೇಹದಲ್ಲಿ ತಾಪಮಾನ ತೀವ್ರವಾಗಿದ್ದರೆ ಹಸಿ ಮೂಲಂಗಿಯ ರಸಕ್ಕೆ ಉಪ್ಪು ಬೆರೆಸಿ ಕುಡಿದರೆ ಇಳಿಮುಖವಾಗುತ್ತದೆ.
 
* ಜೇನು ನೋಣ ಕಡಿತದ ನೋವು ಮತ್ತು ಬಾವು ಇಳಿಯಲು ಮೂಲಂಗಿಯ ರಸದ ಲೇಪನ ಮಾಡಬೇಕು.
 
* ಹಸಿ ಮೂಲಂಗಿಯನ್ನು ನಿಯಮಿತ ಪ್ರಮಾಣದಲ್ಲಿ ಸೇವಿಸಿದರೆ ಆಹಾರ ಸುಲಭವಾಗಿ ಜೀರ್ಣವಾಗುತ್ತದೆ.
 
* ಚೇಳು ಕುಟುಕಿದ ಜಾಗಕ್ಕೆ ಮೂಲಂಗಿ ಮತ್ತು ಉಪ್ಪನ್ನು ಅರೆದು ಹಚ್ಚಿದರೆ ವಿಷ ಏರುವುದಿಲ್ಲ ಮತ್ತು ಉರಿ ಕಡಿಮೆಯಾಗುತ್ತದೆ.
 
* ಮೂಲಂಗಿ ರಸದ ಸೇವನೆಯಿಂದ ವಾಕರಿಕೆ, ವಾಂತಿ ಹಾಗೂ ಗಂಟಲ ಬೇನೆಯ ತೊಂದರೆಗಳನ್ನು ನಿವಾರಿಸಬಹುದು.
 
* ಹಸಿ ಮೂಲಂಗಿಯನ್ನು ತುರಿದು ಉಪ್ಪು ಮತ್ತು ನಿಂಬೆರಸ ಸೇರಿಸಿ ತಿಂದರೆ ನೆಗಡಿ ನಿವಾರಣೆಯಾಗುತ್ತದೆ. 
 
* ಅಸ್ತಮಾ ಮುಂತಾದ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲು ವವರಿಗೆ ಮೂಲಂಗಿ ಸೇವನೆ ಒಳ್ಳೆಯದು.
 
* ಮೂಲಂಗಿ ಸೊಪ್ಪಿನ ರಸವನ್ನು ಸೇವಿಸುವುದರಿಂದ ಮೂತ್ರವೂ ಕಟ್ಟಿಕೊಂಡಿದ್ದರೆ ಅದರ ಬಿಡುಗಡೆಯಾಗುತ್ತದೆ.
 
* ಮೂಲಂಗಿಯ ಸೇವನೆಯಿಂದ ಮಧುಮೇಹವನ್ನು ನಿಯಂತ್ರಿಸಬಹುದು
 
* ಕೆಂಪು ಮೂಲಂಗಿಯ ಸೇವನೆಯಿಂದ ಮೂಳೆಗಳು ಗಟ್ಟಿಯಾಗಿರುತ್ತದೆ.
 
* ಊಟದ ಜೊತೆಗೆ ಹಸಿಮೂಲಂಗಿಯನ್ನು ಸೇವಿಸುವುದರಿಂದ ಕಣ್ಣು, ಮೂಗು, ಕಿವಿ ಮತ್ತು ಗಂಟಲಿನ ಸಮಸ್ಯೆಗಳು ನಿವಾರಣೆಯಾಗುತ್ತವೆ. 
 
* ವಾಕರಿಕೆ ಮತ್ತು ತಲೆನೋವು ತೀವ್ರವಾಗಿ ಬಾಧಿಸಿದಾಗ ಮೂಲಂಗಿಯ ರಸಕ್ಕೆ ಕಾಳುಮೆಣಸಿನ ಹುಡಿ ಬೆರೆಸಿ ಸೇವಿಸಬಹುದು.
 
* ನಿಯಮಿತ ಮೂಲಂಗಿಯ ಸೇವನೆಯಿಂದ ತೂಕವನ್ನು ಇಳಿಸಬಹುದು
 
* ಮೂಲಂಗಿಯು ಹೃದಯ ಮತ್ತು ರಕ್ತಪರಿಚಲನಾ ವ್ಯವಸ್ಥೆಯನ್ನು ಉತ್ತಮಗೊಳಿಸಲು ನೆರವಾಗುತ್ತದೆ.
 
* ಮೂಲಂಗಿ ಎಲೆಯನ್ನು ಜಗಿಯುವುದು ತಿನ್ನುವುದರಿಂದ ಅಥವಾ ಅದರ ಜ್ಯೂಸ್ ಮಾಡಿ ಕುಡಿಯುವುದರಿಂದ ಹಲ್ಲಿಗಳು ಆರೋಗ್ಯವಾಗಿರುತ್ತವೆ.
 
* ಮೂಲಂಗಿಯ ಸೇವನೆಯು ಮೂತ್ರನಾಳದ ಸೋಂಕು ನಿವಾರಿಸುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ